Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ -ಬೆಂಗಳೂರು ವಂದೇ ಭಾರತ್ ರೈಲು...

ಕಲಬುರಗಿ -ಬೆಂಗಳೂರು ವಂದೇ ಭಾರತ್ ರೈಲು ಸಂಚಾರದ ವೇಳಾಪಟ್ಟಿಯಲ್ಲಿ ಬದಲಾವಣೆ

ವಾರ್ತಾಭಾರತಿವಾರ್ತಾಭಾರತಿ2 Dec 2025 6:30 PM IST
share
ಕಲಬುರಗಿ -ಬೆಂಗಳೂರು ವಂದೇ ಭಾರತ್ ರೈಲು ಸಂಚಾರದ ವೇಳಾಪಟ್ಟಿಯಲ್ಲಿ ಬದಲಾವಣೆ
ಪ್ರಯಾಣಿಕರಿಗೆ ಹೊಸ ವರ್ಷದ ಉಡುಗೊರೆ ಎಂದ ಮಾಜಿ ಸಂಸದ ಉಮೇಶ್ ಜಾಧವ್

ಕಲಬುರಗಿ : ಬಹುಕಾಲದ ಬೇಡಿಕೆಯಾಗಿದ್ದ ಕಲಬುರಗಿ ಮತ್ತು ಬೆಂಗಳೂರು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ರೈಲು ಸಂಚಾರದ ಸಮಯವನ್ನು ಜನವರಿ ಒಂದರಿಂದ ಬದಲಾಯಿಸಲು ಕೇಂದ್ರ ರೈಲ್ವೆ ಇಲಾಖೆ ನಿರ್ಧರಿಸಿರುವುದು ಪ್ರಯಾಣಿಕರಿಗೆ ಹೊಸ ವರ್ಷದ ಉಡುಗೊರೆಯಾಗಿದೆ ಎಂದು ಮಾಜಿ ಸಂಸದ ಡಾ.ಉಮೇಶ್ ಜಾಧವ್ ಹೇಳಿದ್ದಾರೆ.

ಬಹುದಿನಗಳಿಂದ ಕಲಬುರಗಿಯಿಂದ ಬೆಂಗಳೂರಿಗೆ ಹೊರಡುವ ವಂದೇ ಭಾರತ್ ರೈಲಿನ ಸಮಯ ಬದಲಾವಣೆ ಮಾಡುವಂತೆ ಕೋರಿ ಪ್ರಯಾಣಿಕರು ಒತ್ತಾಯಿಸುತ್ತಿದ್ದು ರೈಲ್ವೆ ಇಲಾಖೆಯವರೊಂದಿಗೆ ಸತತವಾಗಿ ಚರ್ಚಿಸಿದ ಪರಿಣಾಮವಾಗಿ ಮುಂದಿನ ತಿಂಗಳು ಜನವರಿ 1 ರಿಂದ ಬೆಳಿಗ್ಗೆ 5.15 ರ ಬದಲು ಬೆಳಗ್ಗೆ 06:10 ಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 02:10 ಕ್ಕೆ (ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೈಯಪ್ಪನಹಳ್ಳಿ) ತಲುಪಲಿದೆ ಎಂದು ಡಾ. ಉಮೇಶ್ ಜಾಧವ್ ತಿಳಿಸಿದ್ದಾರೆ

ಬೆಂಗಳೂರಿನಿಂದ ಕಲಬುರಗಿಗೆ ಹೊರಡುವ ಸಮಯದಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ ಇದೀಗ ಈ ರೈಲು ಕಲಬುರಗಿಗೆ ಮೊದಲಿನಿಂದ 45 ನಿಮಿಷ ಬೇಗ ಅಂದರೆ ರಾತ್ರಿ 11.30 ಗಂಟೆಗೆ ಬದಲಾಗಿ ರಾತ್ರಿ 10.45 ಕ್ಕೆ ತಲುಪಲಿದೆ. ಒಟ್ಟಾರೆ ಪ್ರಯಾಣದ ಸಮಯ ಇದೀಗ 8 ಗಂಟೆಯಲ್ಲಿ ಪೂರ್ಣಗೊಳ್ಳಲಿದೆ. ಇನ್ನು ಮುಂದೆ ಪುಟ್ಟಪರ್ತಿ ಸತ್ಯಸಾಯಿ ದರ್ಶನ ಮಾಡುವ ಭಕ್ತರಿಗೆ ಅನುಕೂಲಕರವಾಗುವಂತೆ ಸತ್ಯಸಾಯಿ ಪ್ರಶಾಂತಿ ನಿಲಯಂ ನಲ್ಲಿ ವಂದೇ ಭಾರತ್ ಗೆ ನಿಲುಗಡೆ ಸೌಲಭ್ಯವನ್ನು ನೀಡಿರುವುದು ಇನ್ನಷ್ಟು ಖುಷಿಯ ಸಂಗತಿ ಎಂದು ಜಾಧವ್ ಹೇಳಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ, ರೈಲ್ವೆ ಖಾತೆಯ ಸಚಿವರಾದ ಅಶ್ವಿನಿ ವೈಷ್ಣವ್ ಮತ್ತು ರಾಜ್ಯ ಸಚಿವರಾದ ವಿ ಸೋಮಣ್ಣ ಅವರ ಪ್ರಯತ್ನದಿಂದಾಗಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು ವಂದೇ ಭಾರತ್ ರೈಲು ಪ್ರಯಾಣಿಕರ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ. ಈ ಹಿಂದೆ ಬೆಳಗ್ಗೆ 5.10 ಕ್ಕೆ ಕಲಬುರಗಿಯಿಂದ ವಂದೇ ಭಾರತ್ ಸಂಚಾರ ಪ್ರಾರಂಭಿಸುತ್ತಿರುವುದರಿಂದ ಮಕ್ಕಳು, ಮಹಿಳೆಯರಿಗೆ ಹಾಗೂ ಹಿರಿಯ ನಾಗರಿಕರಿಗೆ ಸಂಚಾರಕ್ಕೆ ಅನಾನುಕೂಲವಾಗಿತ್ತು. ಬೀದರ್ ಮತ್ತಿತರ ಕಡೆಗಳಿಂದ ಆಗಮಿಸುತ್ತಿರುವ ಪ್ರಯಾಣಿಕರಿಗೂ ಕಷ್ಟ ಸಾಧ್ಯವಾಗಿದ್ದು ಇದೀಗ ನೂತನ ವೇಳಾಪಟ್ಟಿ ಅತ್ಯಂತ ಅನುಕೂಲಕರ ವಾಗಲಿದೆ. ಸಾರ್ವಜನಿಕರು ಒಂದೇ ಭಾರತ್ ರೈಲು ಸೇವೆಯನ್ನು ಪೂರ್ಣವಾಗಿ ಬಳಸಿಕೊಳ್ಳುವಂತೆ ಡಾ. ಜಾಧವ್ ತಿಳಿಸಿದ್ದಾರೆ .

share
ವಾರ್ತಾಭಾರತಿ
ವಾರ್ತಾಭಾರತಿ
Next Story
X