ರಾಮದೇವ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದ ಕೇರಳದ ನ್ಯಾಯಾಲಯ

ಬಾಬಾ ರಾಮದೇವ್ | Photo: PTI
ಪಾಲಕ್ಕಾಡ್ : ದಾರಿತಪ್ಪಿಸುವ ವೈದ್ಯಕೀಯ ಜಾಹೀರಾತಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಕಾರಣ ಪತಂಜಲಿ ಆಯುರ್ವೇದದ ಸಹ-ಸಂಸ್ಥಾಪಕ ಯೋಗ ಗುರು ರಾಮದೇವ್ ಮತ್ತು ಆಚಾರ್ಯ ಬಾಲಕೃಷ್ಣ ವಿರುದ್ಧ ಕೇರಳದ ಪಾಲಕ್ಕಾಡ್ ನ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ರವಿವಾರ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ.
ದಾರಿತಪ್ಪಿಸುವ ವೈದ್ಯಕೀಯ ಜಾಹೀರಾತುಗಳನ್ನು ನೀಡಿದ ಆರೋಪದ ಮೇಲೆ ದಿವ್ಯಾ ಫಾರ್ಮಸಿ ವಿರುದ್ಧ ಡ್ರಗ್ಸ್ ಇನ್ಸ್ಪೆಕ್ಟರ್ ದಾಖಲಿಸಿದ ಕ್ರಿಮಿನಲ್ ಪ್ರಕರಣದಲ್ಲಿ ರಾಮದೇವ್ ಮತ್ತು ಆಚಾರ್ಯ ಬಾಲಕೃಷ್ಣ ಹಾಜರಾಗದ ಹಿನ್ನೆಲೆಯಲ್ಲಿ ಕೇರಳದ ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಗಳನ್ನು ಹೊರಡಿಸಿದೆ.
ಈ ಹಿಂದೆ ನ್ಯಾಯಾಲಯ ಫೆಬ್ರವರಿ 1ರಂದು ಆರೋಪಿಗಳಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿತ್ತು. ಆದರೆ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದೆ.
Next Story





