ಕೇರಳ | ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಲೈಂಗಿಕ ಕಿರುಕುಳ ಆರೋಪಿಸಿದ ತೃತೀಯಲಿಂಗಿ

Photo | indiatoday
ತಿರುವಂನತಪುರಂ : ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಕೇರಳ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಲಿಂಗತ್ವ ಅಲ್ಪಸಂಖ್ಯಾತ ಕಾರ್ಯಕರ್ತೆಯೋರ್ವರು ಲೈಂಗಿಕ ಕಿರುಕುಳ ಆರೋಪವನ್ನು ಮಾಡಿದ್ದಾರೆ.
"ತೃಕ್ಕಾಕರ ಉಪಚುನಾವಣಾ ಪ್ರಚಾರದ ಸಂದರ್ಭದಲ್ಲಿ ನಾನು ರಾಹುಲ್ ಮಾಂಕೂಟತ್ತಿಲ್ ಅವರನ್ನು ಭೇಟಿಯಾದೆ. ನಂತರ ನಾವು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದೆವು. ಆರಂಭದಲ್ಲಿ ಅವರು ರಾತ್ರಿ 11 ಗಂಟೆಯ ನಂತರ ನನಗೆ ಕರೆ ಮಾಡುತ್ತಿದ್ದರು. ನಂತರ, ನನಗೆ ನಿರಂತರವಾಗಿ ಕರೆ ಮಾಡಲು ಪ್ರಾರಂಭಿಸಿದರು. ಇಡೀ ಸಂಭಾಷಣೆಯ ಸಮಯದಲ್ಲಿ ಅವರು ರಾಜಕೀಯದ ಬಗ್ಗೆ ಅಷ್ಟೇನೂ ಮಾತನಾಡಲಿಲ್ಲ. ರಾಹುಲ್ ಮಾಂಕೂಟತ್ತಿಲ್ ನನ್ನ ಮೇಲೆ ಅತ್ಯಾಚಾರ ಎಸಗಲು ಬಯಸಿರುವುದಾಗಿ ಹೇಳಿದ್ದರು. ಅದಕ್ಕಾಗಿ ಬೆಂಗಳೂರು ಅಥವಾ ಹೈದರಾಬಾದ್ಗೆ ಜೊತೆಯಾಗಿ ಹೋಗುವಂತೆಯೂ ಹೇಳಿದ್ದರು” ಎಂದು ಲಿಂಗತ್ವ ಅಲ್ಪಸಂಖ್ಯಾತ ಕಾರ್ಯಕರ್ತೆ ಅವಂತಿಕಾ ಆರೋಪಿಸಿದ್ದಾರೆ.
ಮಲಯಾಳಂ ನಟಿ ರಿನಿ ಜಾರ್ಜ್ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಗುರುವಾರ ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿದ್ದರು. ಇದರ ಬೆನ್ನಲ್ಲೇ ಅವರು ಕೇರಳ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.





