‘ನಾನು ಅಥವಾ ಆತ’ ಹೇಳಿಕೆ ಬಳಿಕ ಯು-ಟರ್ನ್: ಅಭಿಷೇಕ್ ನನ್ನ ಪುತ್ರನಿದ್ದಂತೆ ಎಂದ ಕಲ್ಯಾಣ್ ಬ್ಯಾನರ್ಜಿ

ಕಲ್ಯಾಣ್ ಬ್ಯಾನರ್ಜಿ , ಅಭಿಷೇಕ್ ಬ್ಯಾನರ್ಜಿ | Photo Credit : PTI
ಹೊಸದಿಲ್ಲಿ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಉಳಿವಿಗಾಗಿ ‘ನಾನು ಅಥವಾ ಅಭಿಷೇಕ್ ಬ್ಯಾನರ್ಜಿ’ ಎಂಬುದರಲ್ಲಿ ಒಬ್ಬರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಪಕ್ಷದ ವರಿಷ್ಠೆ ಮಮತಾ ಬ್ಯಾನರ್ಜಿ ಅವರಿಗೆ ಗಡುವು ನೀಡಿದ್ದ ಸಂಸದ ಕಲ್ಯಾಣ್ ಬ್ಯಾನರ್ಜಿ, ಇದೀಗ ತಮ್ಮ ನಿಲುವು ಮೃದುಗೊಳಿಸಿದ್ದು, “ಅಭಿಷೇಕ್ ಬ್ಯಾನರ್ಜಿ ನನಗೆ ಪುತ್ರನಿದ್ದಂತೆ” ಎಂದು ಹೇಳಿದ್ದಾರೆ.
ಕಲ್ಯಾಣ್ ಬ್ಯಾನರ್ಜಿ ಅವರ ಟೀಕೆಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದ ಅಭಿಷೇಕ್ ಬ್ಯಾನರ್ಜಿ, “ಸಂಸದ ಕಲ್ಯಾಣ್ ಬ್ಯಾನರ್ಜಿ ನನ್ನ ಬಗ್ಗೆ ಏನೇ ಹೇಳಿಕೆ ನೀಡಿದರೂ ನನಗೆ ಯಾವುದೇ ಸಮಸ್ಯೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದರು.
ಈ ಬೆಳವಣಿಗೆಯ ಬೆನ್ನಲ್ಲೇ, ವಿಧಾನಸಭೆಯ ವಿಪಕ್ಷ ನಾಯಕ ಸ್ಥಾನಕ್ಕೆ ಹಕ್ಕು ಮಂಡಿಸಲು ನಕಲಿ ಸಹಿಗಳನ್ನು ಸಭಾಧ್ಯಕ್ಷರಿಗೆ ಸಲ್ಲಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಾಜ್ಯ ಅಪರಾಧ ತನಿಖಾ ವಿಭಾಗ (CID) ಅಭಿಷೇಕ್ ಬ್ಯಾನರ್ಜಿ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು. ಈ ಎರಡು ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಲ್ಯಾಣ್ ಬ್ಯಾನರ್ಜಿ ಅವರ ಹೊಸ ಹೇಳಿಕೆ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.
“ಅಭಿಷೇಕ್ ಬ್ಯಾನರ್ಜಿ ತಾನು ಹೇಳಬೇಕಿದ್ದ ಎಲ್ಲವನ್ನೂ ನಿನ್ನೆಯೇ ಹೇಳಿದ್ದಾನೆ. ಆತ ನನಗೆ ಪುತ್ರನಿದ್ದಂತೆ. ತನ್ನ ಪುತ್ರನ ಎಲ್ಲ ತಪ್ಪುಗಳನ್ನೂ ಮನ್ನಿಸುವುದು ತಂದೆಯ ಕರ್ತವ್ಯ. ಈಗ ಏನೇ ಪರಿಸ್ಥಿತಿ ಎದುರಾದರೂ ಅದರ ವಿರುದ್ಧ ನಾವು ಒಗ್ಗಟ್ಟಾಗಿ ಹೋರಾಡಲಿದ್ದೇವೆ” ಎಂದು ಕಲ್ಯಾಣ್ ಬ್ಯಾನರ್ಜಿ ಹೇಳಿದ್ದಾರೆ.
“ಪಶ್ಚಿಮ ಬಂಗಾಳ ಹಾಗೂ ದೇಶದ ಇತರ ಭಾಗಗಳಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಪಶ್ಚಿಮ ಬಂಗಾಳದಲ್ಲಿ ಈ ಹಿಂದೆ ಎಂದಿಗೂ ಇಂತಹ ಪರಿಸ್ಥಿತಿ ಇರಲಿಲ್ಲ. ವಿರೋಧ ಪಕ್ಷಗಳನ್ನು ಸಂಪೂರ್ಣವಾಗಿ ಮೌನಗೊಳಿಸಲಾಗಿದೆ. ರಾಜ್ಯದಲ್ಲಿ ಪ್ರತೀಕಾರದ ರಾಜಕಾರಣ ನಡೆಯುತ್ತಿದ್ದು, ಅದರ ವಿರುದ್ಧ ನಾವು ಹೋರಾಡಬೇಕಿದೆ” ಎಂದೂ ಅವರು ಹೇಳಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದ ಬಳಿಕ, ಅವರ ವಿರುದ್ಧ ತನಿಖೆಗೆ ಆದೇಶಿಸಿರುವ ರಾಜ್ಯದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರ ಕ್ರಮವನ್ನು ಉಲ್ಲೇಖಿಸಿ ಕಲ್ಯಾಣ್ ಬ್ಯಾನರ್ಜಿ ಈ ಹೇಳಿಕೆ ನೀಡಿದ್ದಾರೆ.






