Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚುನಾವಣಾ ಆಯೋಗದ ‘ನಿಮ್ಮ ಅಭ್ಯರ್ಥಿಯನ್ನು...

ಚುನಾವಣಾ ಆಯೋಗದ ‘ನಿಮ್ಮ ಅಭ್ಯರ್ಥಿಯನ್ನು ತಿಳಿದುಕೊಳ್ಳಿ’ ಆ್ಯಪ್ ಕುರಿತು ನಿಮಗೆ ಗೊತ್ತಿರಬೇಕಾದ ಮಾಹಿತಿ ಇಲ್ಲಿದೆ...

ವಾರ್ತಾಭಾರತಿವಾರ್ತಾಭಾರತಿ17 March 2024 5:18 PM IST
share
ಚುನಾವಣಾ ಆಯೋಗದ ‘ನಿಮ್ಮ ಅಭ್ಯರ್ಥಿಯನ್ನು ತಿಳಿದುಕೊಳ್ಳಿ’ ಆ್ಯಪ್ ಕುರಿತು ನಿಮಗೆ ಗೊತ್ತಿರಬೇಕಾದ ಮಾಹಿತಿ ಇಲ್ಲಿದೆ...

ಹೊಸದಿಲ್ಲಿ: ಚುನಾವಣಾ ಆಯೋಗವು ಲೋಕಸಭಾ ಚುನಾವಣೆಗಳನ್ನು ಘೋಷಿಸುವ ಮುನ್ನ ‘ನೋ ಯುವರ್ ಕ್ಯಾಂಡಿಡೇಟ್ (ನಿಮ್ಮ ಅಭ್ಯರ್ಥಿಯನ್ನು ತಿಳಿದುಕೊಳ್ಳಿ)’ ಎಂಬ ನೂತನ ಆ್ಯಪ್‌ನ್ನು ಬಿಡುಗಡೆಗೊಳಿಸಿದೆ.

ತಮ್ಮ ಕ್ಷೇತ್ರದಲ್ಲಿಯ ಯಾವುದೇ ಅಭ್ಯರ್ಥಿ ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿದ್ದಾನೆಯೇ ಎನ್ನುವುದನ್ನು ತಿಳಿದುಕೊಳ್ಳಲು ಮತದಾರರಿಗೆ ನೆರವಾಗುವುದು ಈ ಆ್ಯಪ್‌ನ ಉದ್ದೇಶವಾಗಿದೆ.

ತಮ್ಮ ಪ್ರತಿನಿಧಿಗಳ ಕುರಿತು ಮಾಹಿತಿಯುಕ್ತ ನಿರ್ಧಾರಗಳನ್ನು ಕೈಗೊಳ್ಳಲು ಮತದಾರರಿಗೆ ಅವಕಾಶ ನೀಡುವ ಮೂಲಕ ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಯನ್ನು ಹೆಚ್ಚಿಸುವುದು ಆ್ಯಪ್‌ನ ಗುರಿಯಾಗಿದೆ.

‘ನೋ ಯುವರ್ ಕ್ಯಾಂಡಿಡೇಟ್’ ಅಥವಾ ಕೆವೈಸಿ ಆ್ಯಪ್ ಆ್ಯಂಡ್ರಾಯ್ಡ್ ಮತ್ತು ಐಒಎಸ್ ಪ್ಲ್ಯಾಟ್‌ಫಾರ್ಮ್‌ಗಳಲ್ಲಿ ಲಭ್ಯವಿದೆ. ಅಭ್ಯರ್ಥಿಗಳ ಸಂಪೂರ್ಣ ಪಟ್ಟಿಯನ್ನು ವೀಕ್ಷಿಸಲು ಮತದಾರರು ಚುನಾವಣಾ ವಿಧ ಮತ್ತು ಮತಕ್ಷೇತ್ರದ ಹೆಸರನ್ನು ಆಯ್ಕ ಮಾಡಿಕೊಳ್ಳುವುದು ಅಗತ್ಯವಾಗುತ್ತದೆ. ಅವರು ಹೆಸರಿನ ಮೂಲಕ ನಿರ್ದಿಷ್ಟ ಅಭ್ಯರ್ಥಿಯ ಬಗ್ಗೆಯೂ ನೋಡಬಹುದು. ಸದ್ರಿ ಅಭ್ಯರ್ಥಿಯು ಯಾವುದೇ ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿದ್ದರೆ ಆ್ಯಪ್ ಆ ಕುರಿತು ಮಾಹಿತಿಯನ್ನು ನೀಡುತ್ತದೆ.

ಅಭ್ಯರ್ಥಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳ ವಿವರಗಳು,ಅವುಗಳ ಸ್ಥಿತಿಗತಿ ಮತ್ತು ಅಪರಾಧಗಳ ಸ್ವರೂಪ ಇವೆಲ್ಲವೂ ಈ ಆ್ಯಪ್‌ನಲ್ಲಿ ಲಭ್ಯವಿದೆ.

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿರುವ ಕ್ಯೂಆರ್ ಕೋಡ್ ಮೂಲಕ ಆ್ಯಂಡ್ರಾಯ್ಡ್ ಮತ್ತು ಐಒಎಸ್‌ಗಳಿಗಾಗಿ ಕೆವೈಸಿ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಪರ್ಯಾಯವಾಗಿ ಬಳಕೆದಾರರು ಗೂಗಲ್ ಪ್ಲೇಸ್ಟೋರ್ ಅಥವಾ ಆ್ಯಪಲ್ ಆ್ಯಪ್ ಸ್ಟೋರ್‌ಗೆ ಭೇಟಿ ನೀಡಿ ಕೆವೈಸಿ ಆ್ಯಪ್‌ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಮತದಾರರು ಈಗ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆಯ ಜೊತೆಗೆ ಅವರ ಆಸ್ತಿಗಳು ಮತ್ತು ಹೊಣೆಗಾರಿಕೆಗಳನ್ನು ಸ್ವತಃ ಪರಿಶೀಲಿಸಬಹುದು. ಈ ಸಂಬಂಧ ಎಲ್ಲ ಮಾಹಿತಿಗಳನ್ನು ಆ್ಯಪ್‌ನಲ್ಲಿ ಲಭ್ಯವಾಗಿಸಲಾಗುತ್ತದೆ. ಕ್ರಿಮಿನಲ್ ದಾಖಲೆಗಳನ್ನು ಹೊಂದಿರುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಮೂರು ಬಾರಿ ವೃತ್ತಪತ್ರಿಕೆಗಳಲ್ಲಿ ಅಥವಾ ಟಿವಿ ವಾಹಿನಿಗಳಲ್ಲಿ ಪ್ರಕಟಿಸುವುದು ಅಗತ್ಯವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ ಕುಮಾರ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇಂತಹ ಕಳಂಕಿತ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಪಕ್ಷಗಳು ತಾವು ಇತರರನ್ನು ಬಿಟ್ಟು ಅವರನ್ನೇ ಏಕೆ ಆಯ್ಕೆ ಮಾಡಿಕೊಂಡಿದ್ದು ಎಂಬ ಬಗ್ಗೆ ವಿವರಣೆಯನ್ನು ನೀಡಬೇಕಾಗುತ್ತದೆ. ಕ್ರಿಮಿನಲ್ ಹಿನ್ನೆಲೆಯ ಅಭ್ಯರ್ಥಿಗಳ ಆಯ್ಕೆಗೆ ಕಾರಣವನ್ನು ಅವು ಸ್ಪಷ್ಟವಾಗಿ ತಿಳಿಸಬೇಕಾಗುತ್ತದೆ ಎಂದೂ ಕುಮಾರ್ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X