ಉಪರಾಷ್ಟ್ರಪತಿ ಚುನಾವಣೆ | ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಎನ್ಡಿಎ ಅಭ್ಯರ್ಥಿ : ಜೆಪಿ ನಡ್ಡಾ ಘೋಷಣೆ

Photo | ndtv
ಹೊಸದಿಲ್ಲಿ: ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರನ್ನು ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್ ಡಿಎ ಅಭ್ಯರ್ಥಿಯಾಗಿ ಬಿಜೆಪಿ ಘೋಷಿಸಿದೆ.
ಉಪ ರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನ್ಕರ್ ರಾಜೀನಾಮೆ ನೀಡಿದ ವಾರಗಳ ನಂತರ ಈ ಬೆಳವಣಿಗೆ ನಡೆದಿದೆ.
ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಅವರು ಎನ್.ಡಿ.ಎ. ಮಿತ್ರಪಕ್ಷಗಳೊಂದಿಗಿನ ಸಭೆಯ ನಂತರ ಉಪ ರಾಷ್ಟ್ರಪತಿ ಹುದ್ದೆಗೆ ಎನ್ ಡಿಎ ಅಭ್ಯರ್ಥಿಯಾಗಿ ಸಿ.ಪಿ. ರಾಧಾಕೃಷ್ಣನ್ ಅವರ ಹೆಸರನ್ನು ಘೋಷಣೆ ಮಾಡಿದರು.
ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಅವರು 16ನೇ ವಯಸ್ಸಿನಿಂದಲೇ ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗೆ ತೊಡಗಿಸಿಕೊಂಡಿದ್ದರು. ರಾಧಾಕೃಷ್ಣನ್ ಅವರು ಕೊಯಮತ್ತೂರಿನಿಂದ ಎರಡು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು. ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
Next Story





