ನಟಿಗೆ ಕಿರುಕುಳ ಆರೋಪ : ಮಲಯಾಳಂ ಚಲನಚಿತ್ರ ನಿರ್ಮಾಪಕ ಸನಲ್ ಕುಮಾರ್ ಮುಂಬೈ ವಿಮಾನ ನಿಲ್ದಾಣದಲ್ಲಿ ಪೊಲೀಸ್ ವಶಕ್ಕೆ

Photo | indianexpress
ಕೊಚ್ಚಿ: ನಟಿಗೆ ಕಿರುಕುಳ ಆರೋಪಕ್ಕೆ ಸಂಬಂಧಿಸಿ ಮಲಯಾಳಂ ಚಲನಚಿತ್ರ ನಿರ್ಮಾಪಕ ಸನಲ್ ಕುಮಾರ್ ಶಶಿಧರನ್ ಅವರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಸಾಮಾಜಿಕ ಮಾಧ್ಯಮದಲ್ಲಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಟಿಯೋರ್ವರು ಶಶಿಧರನ್ ವಿರುದ್ಧ ಜನವರಿಯಲ್ಲಿ ಏಳಮಕ್ಕರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಈ ಮೊದಲು ಸನಲ್ ಕುಮಾರ್ ಶಶಿಧರನ್ ಬಂಧನಕ್ಕೆ ಲುಕ್ ಔಟ್ ನೋಟಿಸ್ ಹೊರಡಿಸಲಾಗಿತ್ತು.
ಶಶಿಧರನ್ ಅವರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಕೊಚ್ಚಿ ನಗರ ಪೊಲೀಸರು ಮುಂಬೈ ವಿಮಾನ ನಿಲ್ದಾಣದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದ್ದಾರೆ.
Next Story





