Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಲಪ್ಪುರಂನಲ್ಲಿ ಭೀಕರ ಭೂಕುಸಿತ; ಲೈವ್...

ಮಲಪ್ಪುರಂನಲ್ಲಿ ಭೀಕರ ಭೂಕುಸಿತ; ಲೈವ್ ವರದಿ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ಮಾಧ್ಯಮ ಸಿಬ್ಬಂದಿ, ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ3 Aug 2026 12:34 PM IST
share
ಮಲಪ್ಪುರಂನಲ್ಲಿ ಭೀಕರ ಭೂಕುಸಿತ; ಲೈವ್ ವರದಿ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ಮಾಧ್ಯಮ ಸಿಬ್ಬಂದಿ, ಪೊಲೀಸರು
ಸಚಿವ ಕುಂಞಾಲಿಕುಟ್ಟಿ ಮನೆ ಸಮೀಪವೇ ಉರುಳಿದ ಗುಡ್ಡ!

ಮಲಪ್ಪುರಂ : ಕೇರಳದಾದ್ಯಂತ ವರದಿಯಾಗುತ್ತಿರುವ ಭಾರಿ ಮಳೆಯ ಬೆನ್ನಲ್ಲೇ, ಮಲಪ್ಪುರಂ ಜಿಲ್ಲೆಯ ಪಾಣಕ್ಕಾಡ್ ಸಮೀಪದ ಪರಪ್ಪನಂಗಾಡಿ-ನಾಡುಕಾಣಿ ರಾಜ್ಯ ಹೆದ್ದಾರಿಯಲ್ಲಿ ಇಂದು (ಆಗಸ್ಟ್ 3) ಭೀಕರ ಭೂಕುಸಿತ ಸಂಭವಿಸಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವಾದರೂ, ರಾಜ್ಯ ಹೆದ್ದಾರಿಯ ಸಂಚಾರ ಸಂಪೂರ್ಣವಾಗಿ ಕಡಿತಗೊಂಡಿದೆ.

ಬೆಳಗ್ಗೆ ಹೆದ್ದಾರಿಯ ಪಕ್ಕದ ಬೆಟ್ಟದ ಒಂದು ಭಾಗ ಕುಸಿದ ತಕ್ಷಣ ಸ್ಥಳಕ್ಕೆ ಪೊಲೀಸರು ಮತ್ತು ಮಾಧ್ಯಮ ಪ್ರತಿನಿಧಿಗಳು ಧಾವಿಸಿದ್ದರು. ಮಾಧ್ಯಮವೊಂದರ ವರದಿಗಾರರು ಸ್ಥಳದಿಂದ ನೇರ ಪ್ರಸಾರ ಮಾಡುತ್ತಿದ್ದಾಗ, ಅವರ ಕಣ್ಣೆದುರೇ ಇಡೀ ಬೆಟ್ಟದ ಬೃಹತ್ ಭಾಗವೊಂದು ಭೀಕರವಾಗಿ ಕುಸಿದು ಬಿದ್ದಿದೆ. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು, ಸುದ್ದಿಗಾರರು ಮತ್ತು ಸಾರ್ವಜನಿಕರು ಕ್ಷಣಾರ್ಧದಲ್ಲಿ ಓಡಿ ಪ್ರಾಣ ಉಳಿಸಿಕೊಂಡಿದ್ದಾರೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸಚಿವ ಕುಂಞಾಲಿಕುಟ್ಟಿ ಮನೆ ಸಮೀಪವೇ ದುರಂತ:

ಈ ಭೂಕುಸಿತವು ಮುಸ್ಲಿಂ ಲೀಗ್ ನಾಯಕ ಹಾಗೂ ರಾಜ್ಯ ಕೈಗಾರಿಕಾ ಸಚಿವ ಪಿ.ಕೆ. ಕುಂಞಾಲಿಕುಟ್ಟಿ ಅವರ ಮನೆಯಿಂದ ಕೇವಲ 200 ರಿಂದ 300 ಮೀಟರ್ ದೂರದಲ್ಲಿ ನಡೆದಿದೆ. ಬೆಟ್ಟದ ಮಣ್ಣು, ಕಲ್ಲು ಹಾಗೂ ಬೃಹತ್ ಮರಗಳು ಹೆದ್ದಾರಿಗೆ ಬಿದ್ದಿದ್ದರಿಂದ ರಸ್ತೆ ಸಂಪೂರ್ಣ ಬಂದ್ ಆಗಿದೆ. ಪ್ರಸ್ತುತ ವಾಹನಗಳನ್ನು ಕೋನಂಪಾರ ಮಾರ್ಗವಾಗಿ ಪರ್ಯಾಯ ರಸ್ತೆಗಳಿಗೆ ತಿರುಗಿಸಲಾಗಿದೆ.

ಅವೈಜ್ಞಾನಿಕ ಕಾಮಗಾರಿಯೇ ಕಾರಣ; ಸಚಿವ, ಸ್ಥಳೀಯರ ಆರೋಪ:

ಖಾಸಗಿ ಆಸ್ಪತ್ರೆ ಅಥವಾ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕಾಗಿ ಜೆಸಿಬಿ ಯಂತ್ರ ಬಳಸಿ ಬೆಟ್ಟದ ತಳಭಾಗದ ಮಣ್ಣನ್ನು ಅವೈಜ್ಞಾನಿಕವಾಗಿ ಅಗೆದು ತೆಗೆದಿರುವುದೇ ಈ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಮತ್ತು ಸಚಿವ ಕುಂಞಾಲಿಕುಟ್ಟಿ ಆರೋಪಿಸಿದ್ದಾರೆ. ನಿಯಮ ಉಲ್ಲಂಘಿಸಿ ಕಾಮಗಾರಿ ನಡೆಸಿದವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಜಂಟಿಯಾಗಿ ರಸ್ತೆ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Tags

landslideMalappuramMediapolicelive reporting
share
ವಾರ್ತಾಭಾರತಿ
ವಾರ್ತಾಭಾರತಿ
Next Story
X