ದುರ್ಗಾಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂದ ಪೊಲೀಸರು; ಸಂತ್ರಸ್ತೆಯ ಸ್ನೇಹಿತನ ಬಂಧನ

Photo credit: PTI
ಕೋಲ್ಕತ್ತಾ: ದುರ್ಗಾಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ. ಬಂಧಿತ ಐವರು ಆರೋಪಿಗಳಲ್ಲಿ ಒಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಕುರಿತು ಇನ್ನೂ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪಶ್ಚಿಮ ಬಂಗಾಳ ಪೊಲೀಸರು ಹೇಳಿದ್ದಾರೆ.
ದುರ್ಗಾಪುರದ ಕಾಡಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದ ರಾತ್ರಿ ಆಕೆಯ ಜೊತೆಗಿದ್ದ ಆಕೆಯ ಸಹಪಾಠಿಯನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ.
"ಓರ್ವ ಆರೋಪಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ನಾವು ಕಂಡುಕೊಂಡಿದ್ದೇವೆ. ಕೃತ್ಯದಲ್ಲಿ ಇತರ ಐವರ ಪಾತ್ರದ ಬಗ್ಗೆ ತನಿಖೆ ನಡೆಯುತ್ತಿದೆ” ಎಂದು ಕೋಲ್ಕತ್ತಾ ಪೊಲೀಸರು ತಿಳಿಸಿದ್ದಾರೆ.
ಈವರೆಗೆ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಇವರಲ್ಲಿ ಸಂತ್ರಸ್ತೆಯ ಸ್ನೇಹಿತ ಕೂಡ ಸೇರಿದ್ದಾನೆ. ಆರೋಪಿಗಳು ಕಸಿದುಕೊಂಡ ಮೊಬೈಲ್ ಫೋನ್ ಅನ್ನು ನಾವು ವಶಪಡಿಸಿಕೊಂಡಿದ್ದೇವೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.





