ಏರ್ ಇಂಡಿಯಾ ವಿಮಾನ ದುರಂತ | ಮೃತರ ಸಂಖ್ಯೆ 265ಕ್ಕೆ ಏರಿಕೆ, ಅಹ್ಮದಾಬಾದ್ನಲ್ಲಿ ಅಧಿಕಾರಿಗಳ ಜೊತೆ ಮೋದಿ ಸಭೆ

Photo | PTI
ಹೊಸದಿಲ್ಲಿ : ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತರ ಸಂಖ್ಯೆ 265ಕ್ಕೆ ಏರಿಕೆಯಾಗಿದೆ. ಅಹ್ಮದಾಬಾದ್ಗೆ ತೆರಳಿದ ಪ್ರಧಾನಿ ಮೋದಿ ವಿಮಾನ ಪತನವಾದ ಬಿಜೆ ವೈದ್ಯಕೀಯ ಕಾಲೇಜ್ ಹಾಸ್ಟೆಲ್ ಬಳಿ ಪರಿಶೀಲನೆ ನಡೆಸಿದ ಬಳಿಕ ಅಹ್ಮದಾಬಾದ್ ವಿಮಾನ ನಿಲ್ಧಾಣದಲ್ಲಿ ಸಚಿವರು ಮತ್ತು ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸುತ್ತಿದ್ದಾರೆ.
ಅವಘಡದಲ್ಲಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತಪಟ್ಟಿರುವ ಬಗ್ಗೆ ಭಾರತೀಯ ವೈದ್ಯಕೀಯ ಸಂಘ ದೃಢಪಡಿಸಿದೆ. ಘಟನೆಯ ನಂತರ ಇತರ 45 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಹ್ಮದಾಬಾದ್ ಸಿವಿಲ್ ಆಸ್ಪತ್ರೆಗೆ ತೆರಳಿದ ಮೋದಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದ್ದಾರೆ.
ಆ ಬಳಿಕ ವಿಮಾನ ದುರಂತದಲ್ಲಿ ಮೃತಪಟ್ಟ ಮಾಜಿ ಸಿಎಂ, ಬಿಜೆಪಿ ನಾಯಕ ವಿಜಯ್ ರೂಪಾನಿ ಅವರ ಪತ್ನಿ ಅಂಜಲಿ ರೂಪಾನಿ ಅವರನ್ನು ಪ್ರಧಾನಿ ಮೋದಿ ಭೇಟಿ ಮಾಡಿದ್ದಾರೆ.
Next Story





