ಕ್ರಿಕೆಟಿಗ ಮುಹಮ್ಮದ್ ಶಮಿಗೆ ಕೊಲೆ ಬೆದರಿಕೆ

ಮುಹಮ್ಮದ್ ಶಮಿ |PC : PTI
ಮುಂಬೈ: ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಮುಹಮ್ಮದ್ ಶಮಿಗೆ ರವಿವಾರ ಇಮೇಲ್ನಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಅಮ್ರೋಹ ಜಿಲ್ಲೆಯ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಪುತ್ ಸಿಂದರ್ ಎಂಬ ವ್ಯಕ್ತಿಯ ಹೆಸರಿನಲ್ಲಿ ಬಂದ ಇಮೇಲ್ನಲ್ಲಿ ಒಂದು ಕೋಟಿ ರೂ. ಹಫ್ತಾಕ್ಕೆ ಬೇಡಿಕೆ ಇಡಲಾಗಿದೆ ಎಂದು ಶಮಿಯ ಸಹೋದರ ಹಸೀಬ್ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ಹಣ ಪಾವತಿಸದಿದ್ದರೆ ಕೊಲೆ ಮಾಡುವ ಬೆದರಿಕೆಯನ್ನು ಹಾಕಲಾಗಿದೆ ಎಂದು ಆರೋಪಿಸಲಾಗಿದೆ. ಸೋಮವಾರ ಮೊದಲ ಮಾಹಿತಿ ವರದಿ ದಾಖಲಿಸಲಾಗಿದೆ.
ಶಮಿ ಈಗ ಐಪಿಎಲ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದಲ್ಲಿ ಆಡುತ್ತಿದ್ದಾರೆ.
ಭಾರತೀಯ ಕ್ರಿಕೆಟ್ ತಂಡದ ಪ್ರಧಾನ ಕೋಚ್ ಗೌತಮ್ ಗಂಭೀರ್ಗೂ ಕಳೆದ ತಿಂಗಳು ಇಮೇಲ್ನಲ್ಲಿ ಕೊಲೆ ಬೆದರಿಕೆಗಳು ಬಂದಿದ್ದವು. ದಿಲ್ಲಿ ಪೊಲೀಸರು ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ.
Next Story





