Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. Madhya Pradesh | ಗೋಸಾಗಟ ಮಾಡುತ್ತಿದ್ದ...

Madhya Pradesh | ಗೋಸಾಗಟ ಮಾಡುತ್ತಿದ್ದ ವ್ಯಕ್ತಿಯನ್ನು ಥಳಿಸಿ ಹತ್ಯೆ ಪ್ರಕರಣ: 7 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ14 Jun 2026 10:50 AM IST
share
Madhya Pradesh | ಗೋಸಾಗಟ ಮಾಡುತ್ತಿದ್ದ ವ್ಯಕ್ತಿಯನ್ನು ಥಳಿಸಿ ಹತ್ಯೆ ಪ್ರಕರಣ: 7 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ನರ್ಮದಾಪುರಂ, ಜೂ.13: 2022ರಲ್ಲಿ ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯಲ್ಲಿ ಗೋ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಥಳಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಅಪರಾಧಿಗಳಿಗೆ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ನರ್ಮದಾಪುರಂ ಜಿಲ್ಲೆಯ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು, ದೀಪಕ್ ಅಲಿಯಾಸ್ ಬಾಬಾ ಕೆವಾತ್, ಅಜಯ್ ಅಲಿಯಾಸ್ ಅಜ್ಜು ರಾಥೋಡ್, ಪ್ರಕಾಶ್ ಕೌಶಲ್, ಪವನ್ ಬಾಥಮ್, ಅಮರ್ ಅಲಿಯಾಸ್ ಭೋಲಾ ಬಾಥಮ್, ಕನ್ಹಯ್ಯ ಬಾಥಮ್ ಹಾಗೂ ಬಲ್ಲು ಅಲಿಯಾಸ್ ಅನುಜ್ ರಘುವಂಶಿಯನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 148, 307/149 ಮತ್ತು 302/149ರ ಅಡಿಯಲ್ಲಿ ತಪ್ಪಿತಸ್ಥರು ಎಂದು ಘೋಷಿಸಿದರು.

ಪ್ರಾಸಿಕ್ಯೂಷನ್‌ ಪ್ರಕಾರ, 2022ರ ಆಗಸ್ಟ್‌ 2–3ರ ರಾತ್ರಿ ಟ್ರಕ್‌ ಚಾಲಕ ಶೇಖ್‌ ಲಾಲಾ, ನಝೀರ್‌ ಅಹ್ಮದ್‌ ಹಾಗೂ ಶೇಖ್‌ ಮುಸ್ತಾಕ್‌ ಅವರೊಂದಿಗೆ ನಂದರವಾಡಾದಿಂದ ಮಹಾರಾಷ್ಟ್ರದ ಕಡೆಗೆ ಗೋವುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಸಿಯೋನಿ ಮಾಲ್ವಾ ವ್ಯಾಪ್ತಿಯ ಬರಾಖಾದ್‌ ಗ್ರಾಮದ ಬಳಿ ಗ್ರಾಮಸ್ಥರ ಗುಂಪೊಂದು ಟ್ರಕ್‌ ತಡೆದು, ಕೋಲುಗಳು ಹಾಗೂ ಲಾಠಿಗಳಿಂದ ಹಲ್ಲೆ ನಡೆಸಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ನಝೀರ್‌ ಅಹ್ಮದ್‌ ಮೃತಪಟ್ಟಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು, ಆರೋಪಿಗಳು ಲಾಠಿ ಮತ್ತು ಕೋಲುಗಳನ್ನು ಹಿಡಿದು ಗುಂಪಾಗಿ ಸೇರಿ ನಝೀರ್ ಅಹ್ಮದ್ ಹಾಗೂ ಇತರರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದೆ.

ಮರಣೋತ್ತರ ಪರೀಕ್ಷಾ ವರದಿಯಲ್ಲಿ ಆರೋಪಿಗಳು ನಝೀರ್ ಅಹ್ಮದ್ ಹಾಗೂ ಇತರರ ಮೇಲೆ ಕೋಲು ಮತ್ತು ಲಾಠಿಗಳಿಂದ ಹಲ್ಲೆ ನಡೆಸಿರುವುದು ಸಾಬೀತಾಗಿದೆ ಎಂದು ನ್ಯಾಯಾಲಯ ಹೇಳಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ನಝೀರ್ ಅಹ್ಮದ್ ಬಳಿಕ ಮೃತಪಟ್ಟಿದ್ದರು ಎಂದು ನ್ಯಾಯಾಲಯ ಉಲ್ಲೇಖಿಸಿದೆ.

ಪ್ರಕರಣವು ಮರಣದಂಡನೆ ವಿಧಿಸಬೇಕಾದ ಅಪರೂಪದ ಪ್ರಕರಣವಲ್ಲ ಎಂದು ಹೇಳಿದ ನ್ಯಾಯಾಲಯ, ಏಳು ಅಪರಾಧಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ ಕೊಲೆ ಯತ್ನ ಪ್ರಕರಣದಲ್ಲಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಗಲಭೆ ಆರೋಪಕ್ಕೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿದೆ.

ಸೌಜನ್ಯ: livelaw.in

Tags

MPCourtCow VigilantesMob Lynching
share
ವಾರ್ತಾಭಾರತಿ
ವಾರ್ತಾಭಾರತಿ
Next Story
X