ತಾಂತ್ರಿಕ ದೋಷ: ದಿಲ್ಲಿ- ಮುಂಬೈ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಹಾರಾಟ ಸ್ಥಗಿತ

Photo | NDTV
ಹೊಸದಿಲ್ಲಿ : ದಿಲ್ಲಿ ವಿಮಾನ ನಿಲ್ದಾಣದಲ್ಲಿ ಸುಮಾರು 160 ಪ್ರಯಾಣಿಕರೊಂದಿಗೆ ಮುಂಬೈಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ಟೇಕ್ ಆಫ್ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ.
ವಿಮಾನದ ಕಾಕ್ಪಿಟ್ನಲ್ಲಿ ಸಣ್ಣ ತಾಂತ್ರಿಕ ಸಮಸ್ಯೆಯ ನಂತರ ಸುರಕ್ಷತೆಯ ದೃಷ್ಟಿಯಿಂದ ಟೇಕ್ಆಫ್ ಅನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ʼವಿಮಾನದಲ್ಲಿ ಸಣ್ಣ ತಾಂತ್ರಿಕ ಸಮಸ್ಯೆಯ ನಂತರ ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಿ ಟೇಕ್ಆಫ್ ಮಾಡದಿರಲು ಪೈಲಟ್ ನಿರ್ಧರಿಸಿದ್ದಾರೆ. ಎಲ್ಲಾ 160 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿ ನಂತರ ಮುಂಬೈಗೆ ಹೋಗುವ ಪರ್ಯಾಯ ವಿಮಾನದಲ್ಲಿ ಕಳಹಿಸಲಾಗಿದೆ. ನಮಗೆ ಪ್ರಯಾಣಿಕರ ಸುರಕ್ಷತೆ ಅತ್ಯಂತ ಮುಖ್ಯವಾದ ವಿಷಯವಾಗಿದೆ. ಅನಾನುಕೂಲತೆಗೆ ವಿಷಾದಿಸುತ್ತೇವೆʼ ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ವಕ್ತಾರರು ತಿಳಿಸಿರುವ ಬಗ್ಗೆ ವರದಿಯಾಗಿದೆ.
Next Story





