Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಕ್ರಮವಾಗಿ ಮರ ಕಡಿದಿದ್ದಾರೆಂದು ಆರೋಪಿಸಿ...

ಅಕ್ರಮವಾಗಿ ಮರ ಕಡಿದಿದ್ದಾರೆಂದು ಆರೋಪಿಸಿ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ವಾರ್ತಾಭಾರತಿವಾರ್ತಾಭಾರತಿ19 Aug 2023 6:07 PM IST
share
ಅಕ್ರಮವಾಗಿ ಮರ ಕಡಿದಿದ್ದಾರೆಂದು ಆರೋಪಿಸಿ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜೈಪುರ್:‌ ಅಕ್ರಮವಾಗಿ ಮರ ಕಡಿಯುತ್ತಿದ್ದಾರೆಂಬ ಕಾರಣಕ್ಕೆ ದುಷ್ಕರ್ಮಿಗಳ ತಂಡವೊಂದು ಮುಸ್ಲಿಂ ವ್ಯಕ್ತಿಯನ್ನು ಹತ್ಯೆಗೈದು ಇತರ ಇಬ್ಬರನ್ನು ಗಾಯಗೊಳಿಸಿದ ಘಟನೆ ರಾಜಸ್ಥಾನದ ಆಲ್ವಾರ್‌ ಎಂಬಲ್ಲಿ ನಡೆದಿದೆ. ಮೂವರೂ ವಾಹನವೊಂದರಲ್ಲಿದ್ದಾಗ ಒಂದು ಡಜನಿಗೂ ಅಧಿಕ ಜನರು ಅವರನ್ನು ತಡೆದಿದ್ದರು ಎಂದು ವರದಿಯಾಗಿದೆ.

ಘಟನೆ ಗುರುವಾರ ರಾತ್ರಿ ನಡೆದಿದ್ದು ಮೃತ ವಾಸಿಂ ಎಂಬಾತನ ತಂದೆ ದೂರು ದಾಖಲಿಸಿದ್ದಾರೆ. ರಾಮಪುರ್‌ ಪ್ರದೇಶದಲ್ಲಿ ತಮ್ಮ ಮಗ ಹಾಗೂ ಇತರ ಇಬ್ಬರು ಮರಗಳನ್ನು ತುಂಡು ಮಾಡಿದ್ದಾರೆಂಬ ಕಾರಣಕ್ಕೆ ಹಲ್ಲೆ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.

ಸ್ಥಳೀಯರು ಪೊಲೀಸರು ಮತ್ತು ಅರಣ್ಯ ಇಲಾಖೆಗೆ ಮಾಹಿತಿ ನೀಡಿ ನಂತರ ಮೂವರಿಗೂ ಥಳಿಸಿದ್ದರು. ನಂತರ ಆಸ್ಪತ್ರೆಗೆ ದಾಖಲಾಗಿದ್ದ ವಾಸಿಂ ಶುಕ್ರವಾರ ಮೃತಪಟ್ಟಿದ್ದಾನೆ.

ಮೂವರೂ ಅಕ್ರಮವಾಗಿ ಮರ ಕಡಿಯುತ್ತಿದ್ದಾರೆಂಬ ಆರೋಪ ಎದುರಿಸುತ್ತಿದ್ದರೆಂದು ಪೊಲೀಸರು ಹೇಳಿದ್ದಾರೆ.

ಹತ್ಯೆ ಹಾಗೂ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕೆಲ ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಾಲ್ಕು ಅರಣ್ಯ ಅಧಿಕಾರಿಗಳನ್ನೂ ಅಮಾನತುಗೊಳಿಸಲಾಗಿದೆ.

ಆರು ಮಂದಿ ಗ್ರಾಮಸ್ಥರು ಮತ್ತು ಓರ್ವ ಜೆಸಿಬಿ ಚಾಲಕನನ್ನೂ ವಶಕ್ಕೆ ಪಡೆದುಕೊಳ್ಳಲಾಗಿದೆ.

ಆದರೆ ಈ ಘಟನೆಯು ಯಾವುದೇ ಜಾತಿ ಅಥವಾ ಧರ್ಮದ ಕಾರಣ ನಡೆದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

Tags

Rajasthan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X