ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
ʼಎನ್‌ಡಿಎʼ ಗೆಲ್ಲುತ್ತೋ? ʼಇಂಡಿಯಾʼ ಗೆಲ್ಲುತ್ತೋ?

ಹೊಸದಿಲ್ಲಿ : ಭಾರತೀಯ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಅಂತಿಮ ಘಟ್ಟ ತಲುಪಿದ್ದು, INDIA ಒಕ್ಕೂಟವು ಸರಕಾರ ರಚನೆಗೆ ಕಸರತ್ತು ಮುಂದುವರೆಸಿದ್ದು ಕಿಂಗ್ ಮೇಕರ್ ಗಳಾದ ಜೆಡಿಯು ಮತ್ತು ಟಿಡಿಪಿಯ ಜೊತೆ ಮಾತುಕತೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ನಿತೀಶ್ ಕುಮಾರ್ ಅವರಿಗೆ INDIA ಒಕ್ಕೂಟ ಸೇರಿದರೆ ಉಪಪ್ರಧಾನಿ ಪಟ್ಟ ನೀಡುವ ಆಫರ್ ನೀಡಲಾಗಿದೆ ಎನ್ನಲಾಗಿದೆ.
ಆಂಧ್ರಪ್ರದೇಶದಲ್ಲಿ ಪುಟಿದೆದ್ದಿರುವ ತೆಲುಗು ದೇಶಂ ಪಾರ್ಟಿ (ಟಿಡಿಪಿ)ಯು ವಿಧಾನಸಭೆಯಲ್ಲೂ ಜಯಭೇರಿ ಭಾರಿಸಿದೆ. ತೆಲುಗು ದೇಶಂ ಪಾರ್ಟಿಯನ್ನು ಸಂಪರ್ಕಿಸಿರುವ INDIA ನಾಯಕರು, ಒಕ್ಕೂಟ ಸೇರಿ ಸರಕಾರ ರಚನೆಗೆ ನೆರವಾದರೆ ಆಂಧ್ರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 7ಕ್ಕೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಜೆ 5 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದಾರೆ.
ಈ ಚುನಾವಣೆಯಲ್ಲಿ NDA ಒಕ್ಕೂಟವು ಕನಿಷ್ಠ 292 ಸ್ಥಾನ ಗಳಲ್ಲಿ ಮುನ್ನಡೆ ಸಾಧಿಸಿದ್ದು, INDIA ಒಕ್ಕೂಟವು 234 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿಯು 239 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೂ ಸರಳ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. INDIA ಒಕ್ಕೂಟದಲ್ಲಿ ಕಾಂಗ್ರೆಸ್ ಪಕ್ಷವು ಕನಿಷ್ಠ 100 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಎರಡನೇ ಅತೀ ದೊಡ್ಡ ಪಕ್ಷಗಾಗಿ ಹೊರಹೊಮ್ಮಿದೆ.
Live Updates
- 4 Jun 2024 12:28 PM IST
ದ.ಕ. ಲೋಕಸಭಾ ಕ್ಷೇತ್ರ | ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರಿಗೆ 98290 ಮತಗಳ ಮುನ್ನಡೆ
8ನೆ ಸುತ್ತಿನ ಎಣಿಕೆ ಮುಕ್ತಾಯಕ್ಕೆ ಕ್ಯಾ.ಬ್ರಿಜೇಶ್ ಚೌಟ 427547 ಮತಗಳನ್ನು ಗಳಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಆರ್. ಪದ್ಮರಾಜ್ 329257 ಮತಗಳನ್ನು ಗಳಿಸಿದ್ದಾರೆ. ಆ ಮೂಲಕ ಬ್ರಿಜೇಶ್ ಚೌಟ 98290 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
- 4 Jun 2024 12:27 PM IST
ಹಾವೇರಿ ಲೋಕಸಭಾ ಕ್ಷೇತ್ರ: ಮಾಜಿ ಸಿಎಂ, ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಗೆ 27054 ಮತಗಳ ಮುನ್ನಡೆ
ಬೊಮ್ಮಾಯಿ 402899 ಮತಗಳನ್ನು ಗಳಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ 375845
ಮತಗಳನ್ನು ಗಳಿಸಿದ್ದಾರೆ.
- 4 Jun 2024 12:26 PM IST
ಮಂಡ್ಯದಲ್ಲಿ ಗೆಲುವಿನತ್ತ ದಾಪುಗಾಲಿಟ್ಟ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ
- 4 Jun 2024 12:25 PM IST
ಉತ್ತರ ಕನ್ನಡದಲ್ಲಿ ಅಂಜಲಿ ನಿಂಬಾಳ್ಕರ್ ವಿರುದ್ಧ ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲುವು : ಘೋಷಣೆ ಮಾತ್ರ ಬಾಕಿ
- 4 Jun 2024 12:25 PM IST
ಧಾರವಾಡ: ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿಗೆ 91734 ಮತಗಳ ಮುನ್ನಡೆ
ಪ್ರಹ್ಲಾದ ಜೋಶಿ- 590522 ಮತ
ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ-498788 ಮತ
- 4 Jun 2024 12:23 PM IST
ದ.ಕ. ಲೋಕಸಭಾ ಕ್ಷೇತ್ರ | ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರಿಗೆ ಭರ್ಜರಿ ಮುನ್ನಡೆ
8ನೆ ಸುತ್ತಿನ ಎಣಿಕೆ ಮುಕ್ತಾಯಕ್ಕೆ ಕ್ಯಾ.ಬ್ರಿಜೇಶ್ ಚೌಟ 415827 ಮತಗಳನ್ನು ಗಳಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಆರ್. ಪದ್ಮರಾಜ್ 319903 ಮತಗಳನ್ನು ಗಳಿಸಿದ್ದಾರೆ. ಆ ಮೂಲಕ ಬ್ರಿಜೇಶ್ ಚೌಟ 95924 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
- 4 Jun 2024 12:21 PM IST
ಕಲಬುರಗಿ ಲೋಕಸಭಾ ಕ್ಷೇತ್ರ: ಮಲ್ಲಿಕಾರ್ಜುನ ಖರ್ಗೆಯ ಅಳಿಯನಿಗೆ ಮುನ್ನಡೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯ ತವರೂರಾದ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ಕಂಡುಬರುತ್ತಿದೆ. ಸದ್ಯ ಖರ್ಗೆಯವರ ಅಳಿಯ, ಕಾಂಗ್ರೆಸ್ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿ 6153 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.
ಹಾಲಿ ಸಂಸದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಹಿನ್ನಡೆ ಅನುಭವಿಸುತ್ತಿದ್ದಾರೆ.







