ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
ʼಎನ್‌ಡಿಎʼ ಗೆಲ್ಲುತ್ತೋ? ʼಇಂಡಿಯಾʼ ಗೆಲ್ಲುತ್ತೋ?

ಹೊಸದಿಲ್ಲಿ : ಭಾರತೀಯ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಅಂತಿಮ ಘಟ್ಟ ತಲುಪಿದ್ದು, INDIA ಒಕ್ಕೂಟವು ಸರಕಾರ ರಚನೆಗೆ ಕಸರತ್ತು ಮುಂದುವರೆಸಿದ್ದು ಕಿಂಗ್ ಮೇಕರ್ ಗಳಾದ ಜೆಡಿಯು ಮತ್ತು ಟಿಡಿಪಿಯ ಜೊತೆ ಮಾತುಕತೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ನಿತೀಶ್ ಕುಮಾರ್ ಅವರಿಗೆ INDIA ಒಕ್ಕೂಟ ಸೇರಿದರೆ ಉಪಪ್ರಧಾನಿ ಪಟ್ಟ ನೀಡುವ ಆಫರ್ ನೀಡಲಾಗಿದೆ ಎನ್ನಲಾಗಿದೆ.
ಆಂಧ್ರಪ್ರದೇಶದಲ್ಲಿ ಪುಟಿದೆದ್ದಿರುವ ತೆಲುಗು ದೇಶಂ ಪಾರ್ಟಿ (ಟಿಡಿಪಿ)ಯು ವಿಧಾನಸಭೆಯಲ್ಲೂ ಜಯಭೇರಿ ಭಾರಿಸಿದೆ. ತೆಲುಗು ದೇಶಂ ಪಾರ್ಟಿಯನ್ನು ಸಂಪರ್ಕಿಸಿರುವ INDIA ನಾಯಕರು, ಒಕ್ಕೂಟ ಸೇರಿ ಸರಕಾರ ರಚನೆಗೆ ನೆರವಾದರೆ ಆಂಧ್ರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 7ಕ್ಕೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಜೆ 5 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದಾರೆ.
ಈ ಚುನಾವಣೆಯಲ್ಲಿ NDA ಒಕ್ಕೂಟವು ಕನಿಷ್ಠ 292 ಸ್ಥಾನ ಗಳಲ್ಲಿ ಮುನ್ನಡೆ ಸಾಧಿಸಿದ್ದು, INDIA ಒಕ್ಕೂಟವು 234 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿಯು 239 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೂ ಸರಳ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. INDIA ಒಕ್ಕೂಟದಲ್ಲಿ ಕಾಂಗ್ರೆಸ್ ಪಕ್ಷವು ಕನಿಷ್ಠ 100 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಎರಡನೇ ಅತೀ ದೊಡ್ಡ ಪಕ್ಷಗಾಗಿ ಹೊರಹೊಮ್ಮಿದೆ.
Live Updates
- 4 Jun 2024 10:50 AM IST
ಬೆಳಗಾವಿ | ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ರಿಗೆ ಭಾರೀ ಮುನ್ನಡೆ
ಶೆಟ್ಟರ್- 334178 ಮತಗಳು
ಮೃಣಾಲ್ ಹೆಬ್ಬಾಳ್ಕರ್- 250010 ಮತಗಳು
ಶೆಟ್ಟರ್ ಗೆ 84168 ಮತಗಳ ಮುನ್ನಡೆ
- 4 Jun 2024 10:50 AM IST
ರಾಜಸ್ಥಾನದಲ್ಲಿ NDA 13 ಕ್ಷೇತ್ರದಲ್ಲಿ ಮತ್ತು INDIA ಮೈತ್ರಿಕೂಟ 11 ಕ್ಷೇತ್ರಗಳಲ್ಲಿ ಮುನ್ನಡೆ
- 4 Jun 2024 10:49 AM IST
AIMIM ಮುಖ್ಯಸ್ಥ ಮತ್ತು ಹೈದರಾಬಾದ್ (ತೆಲಂಗಾಣ) ಅಭ್ಯರ್ಥಿ ಅಸಾದುದ್ದೀನ್ ಉವೈಸಿ 15,461 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
- 4 Jun 2024 10:48 AM IST
ಬೆಂಗಳೂರು ಸೆಂಟ್ರಲ್: ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಮುನ್ನಡೆ 20859 ಮತಗಳಿಗೆ ಏರಿಕೆ
ಮನ್ಸೂರ್ ಅಲಿ ಖಾನ್: 135744 ಮತ
ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್: 114885 ಮತ
- 4 Jun 2024 10:47 AM IST
ಬಿಜೆಪಿ ಕಾಂಗ್ರೆಸ್ ನೇರಾ ನೇರ ಪೈಪೋಟಿಯ 170 ಕ್ಷೇತ್ರಗಳಲ್ಲಿ ಬಿಜೆಪಿ 115 ಮತ್ತು ಕಾಂಗ್ರೆಸ್ 55 ಕ್ಷೇತ್ರಗಳಲ್ಲಿ ಮುನ್ನಡೆ
- 4 Jun 2024 10:46 AM IST
ಬೆಂಗಳೂರು ಕೆಂದ್ರದಲ್ಲಿ ಕಾಂಗ್ರೆಸ್‌ನ ಮನ್ಸೂರ್ ಖಾನ್ ಗೆ ಮುನ್ನಡೆ
- 4 Jun 2024 10:46 AM IST
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ: ಶೋಭಾ ಕರಂದ್ಲಾಜೆಗೆ 49618 ಮತಗಳ ಮುನ್ನಡೆ
ಶೋಭಾ ಕರಂದ್ಲಾಜೆ - 124434 ಮತ
ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜೀವ್ ಗೌಡ - 74816 ಮತ
- 4 Jun 2024 10:46 AM IST
ಹರಿಯಾಣದ ಕರ್ನಲ್ ಲೋಕಸಭಾ ಕ್ಷೇತ್ರದಲ್ಲಿ 10,766 ಮತಗಳ ಅಂತರದಿಂದ ಕಾಂಗ್ರೆಸ್‌ನ ದಿವ್ಯಾಂಶು ಬುಧಿರಾಜ ವಿರುದ್ಧ ಹರಿಯಾಣದ ಮಾಜಿ ಕಮ್ ಮನೋಹರ್ ಲಾಲ್ ಖಟ್ಟರ್ ಮುನ್ನಡೆ ಸಾಧಿಸಿದ್ದಾರೆ
- 4 Jun 2024 10:45 AM IST
ಧಾರವಾಡ: ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿಗೆ 37,881 ಮತಗಳ ಮುನ್ನಡೆ
ಪ್ರಹ್ಲಾದ ಜೋಶಿ-2,39,133 ಮತ
ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ-2,01,252 ಮತ







