ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
ʼಎನ್‌ಡಿಎʼ ಗೆಲ್ಲುತ್ತೋ? ʼಇಂಡಿಯಾʼ ಗೆಲ್ಲುತ್ತೋ?

ಹೊಸದಿಲ್ಲಿ : ಭಾರತೀಯ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಅಂತಿಮ ಘಟ್ಟ ತಲುಪಿದ್ದು, INDIA ಒಕ್ಕೂಟವು ಸರಕಾರ ರಚನೆಗೆ ಕಸರತ್ತು ಮುಂದುವರೆಸಿದ್ದು ಕಿಂಗ್ ಮೇಕರ್ ಗಳಾದ ಜೆಡಿಯು ಮತ್ತು ಟಿಡಿಪಿಯ ಜೊತೆ ಮಾತುಕತೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ನಿತೀಶ್ ಕುಮಾರ್ ಅವರಿಗೆ INDIA ಒಕ್ಕೂಟ ಸೇರಿದರೆ ಉಪಪ್ರಧಾನಿ ಪಟ್ಟ ನೀಡುವ ಆಫರ್ ನೀಡಲಾಗಿದೆ ಎನ್ನಲಾಗಿದೆ.
ಆಂಧ್ರಪ್ರದೇಶದಲ್ಲಿ ಪುಟಿದೆದ್ದಿರುವ ತೆಲುಗು ದೇಶಂ ಪಾರ್ಟಿ (ಟಿಡಿಪಿ)ಯು ವಿಧಾನಸಭೆಯಲ್ಲೂ ಜಯಭೇರಿ ಭಾರಿಸಿದೆ. ತೆಲುಗು ದೇಶಂ ಪಾರ್ಟಿಯನ್ನು ಸಂಪರ್ಕಿಸಿರುವ INDIA ನಾಯಕರು, ಒಕ್ಕೂಟ ಸೇರಿ ಸರಕಾರ ರಚನೆಗೆ ನೆರವಾದರೆ ಆಂಧ್ರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 7ಕ್ಕೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಜೆ 5 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದಾರೆ.
ಈ ಚುನಾವಣೆಯಲ್ಲಿ NDA ಒಕ್ಕೂಟವು ಕನಿಷ್ಠ 292 ಸ್ಥಾನ ಗಳಲ್ಲಿ ಮುನ್ನಡೆ ಸಾಧಿಸಿದ್ದು, INDIA ಒಕ್ಕೂಟವು 234 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿಯು 239 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೂ ಸರಳ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. INDIA ಒಕ್ಕೂಟದಲ್ಲಿ ಕಾಂಗ್ರೆಸ್ ಪಕ್ಷವು ಕನಿಷ್ಠ 100 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಎರಡನೇ ಅತೀ ದೊಡ್ಡ ಪಕ್ಷಗಾಗಿ ಹೊರಹೊಮ್ಮಿದೆ.
Live Updates
- 4 Jun 2024 4:18 PM IST
ಮೈಸೂರಿನಲ್ಲಿ ಕಾಂಗ್ರೆಸ್‌ನ ಲಕ್ಷ್ಮಣ್ ವಿರುದ್ಧ ಬಿಜೆಪಿಯ ಯದುವೀರ್ ಒಡೆಯರ್ ಗೆಲುವು
- 4 Jun 2024 4:17 PM IST
ಉತ್ತರ ಪ್ರದೇಶದ ಅಯೋಧ್ಯೆ (ಫೈಝಾಬಾದ್) ಲೋಕಸಭಾ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅವಧೇಶ್ ಪ್ರಸಾದ್ ಅವರು ಬಿಜೆಪಿಯ ಲಲ್ಲೂ ಸಿಂಗ್ ವಿರುದ್ಧ ಜಯಭೇರಿ ಬಾರಿಸಿದ್ದಾರೆ.
- 4 Jun 2024 3:46 PM IST
ತಿರುವನಂತಪುರಂ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಶಶಿ ತರೂರ್ ಗೆ 15947 ಸಾವಿರ ಮತಗಳ ಅಂತರದಿಂದ ಗೆಲುವು
- 4 Jun 2024 3:38 PM IST
ರಾಯ್ ಬರೇಲಿಯಲ್ಲಿ 4 ಲಕ್ಷ ಮತಗಳ ಅಂತರದಿಂದ ಜಯಭೇರಿ ಭಾರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
- 4 Jun 2024 3:37 PM IST
ಭಾರತೀಯ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಅಂತಿಮ ಘಟ್ಟ ತಲುಪಿದ್ದು, INDIA ಒಕ್ಕೂಟವು ಸರಕಾರ ರಚನೆಗೆ ಕಸರತ್ತು ಮುಂದುವರೆಸಿದ್ದು ಕಿಂಗ್ ಮೇಕರ್ ಗಳಾದ ಜೆಡಿಯು ಮತ್ತು ಟಿಡಿಪಿಯ ಜೊತೆ ಮಾತುಕತೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ನಿತೀಶ್ ಕುಮಾರ್ ಅವರಿಗೆ INDIA ಒಕ್ಕೂಟ ಸೇರಿದರೆ ಉಪಪ್ರಧಾನಿ ಪಟ್ಟ ನೀಡುವ ಆಫರ್ ನೀಡಲಾಗಿದೆ ಎನ್ನಲಾಗಿದೆ.
ಆಂಧ್ರಪ್ರದೇಶದಲ್ಲಿ ಪುಟಿದೆದ್ದಿರುವ ತೆಲುಗು ದೇಶಂ ಪಾರ್ಟಿ (ಟಿಡಿಪಿ)ಯು ವಿಧಾನಸಭೆಯಲ್ಲೂ ಜಯಭೇರಿ ಭಾರಿಸಿದೆ. ತೆಲುಗು ದೇಶಂ ಪಾರ್ಟಿಯನ್ನು ಸಂಪರ್ಕಿಸಿರುವ INDIA ನಾಯಕರು, ಒಕ್ಕೂಟ ಸೇರಿ ಸರಕಾರ ರಚನೆಗೆ ನೆರವಾದರೆ ಆಂಧ್ರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 7ಕ್ಕೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಜೆ 5 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದಾರೆ.
ಈ ಚುನಾವಣೆಯಲ್ಲಿ NDA ಒಕ್ಕೂಟವು ಕನಿಷ್ಠ 292 ಸ್ಥಾನ ಗಳಲ್ಲಿ ಮುನ್ನಡೆ ಸಾಧಿಸಿದ್ದು, INDIA ಒಕ್ಕೂಟವು 234 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿಯು 239 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೂ ಸರಳ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. INDIA ಒಕ್ಕೂಟದಲ್ಲಿ ಕಾಂಗ್ರೆಸ್ ಪಕ್ಷವು ಕನಿಷ್ಠ 100 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಎರಡನೇ ಅತೀ ದೊಡ್ಡ ಪಕ್ಷಗಾಗಿ ಹೊರಹೊಮ್ಮಿದೆ.
- 4 Jun 2024 3:30 PM IST
ಕಾಸರಗೋಡು: ರಾಜ್ ಮೋಹನ್ ಉಣ್ಣಿತ್ತಾನ್ ರಿಗೆ 52,126 ಮತಗಳ ಮುನ್ನಡೆ
ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ 52,126 ಮತಗಳ ಮುನ್ನಡೆ ಸಾಧಿಸಿದ್ದಾರೆ. ಉಣ್ಣಿತ್ತಾನ್ 2,82,337 ಮತಗಳನ್ನು ಗಳಿಸಿದ್ದಾರೆ. ಸಿಪಿಎಂ ಅಭ್ಯರ್ಥಿ ಎಂ.ವಿ.ಬಾಲಕೃಷ್ಣನ್ ಮಾಸ್ಟರ್ 2,30,211 ಮತಗಳನ್ನು ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಅಶ್ವಿನಿ ಎಂ.ಎಲ್. 1,36,266 ಮತಗಳನ್ನು ಗಳಿಸಿ ತೃತೀಯ ಸ್ಥಾನದಲ್ಲಿದ್ದಾರೆ.
- 4 Jun 2024 3:10 PM IST
ಕಾಸರಗೋಡು: ರಾಜ್ ಮೋಹನ್ ಉಣ್ಣಿತ್ತಾನ್ ರಿಗೆ 46,564 ಮತಗಳ ಮುನ್ನಡೆ
ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ 46,564 ಮತಗಳ ಮುನ್ನಡೆ ಸಾಧಿಸಿದ್ದಾರೆ. ಉಣ್ಣಿತ್ತಾನ್ 2,62,313 ಮತಗಳನ್ನು ಗಳಿಸಿದ್ದಾರೆ. ಸಿಪಿಎಂ ಅಭ್ಯರ್ಥಿ ಎಂ.ವಿ.ಬಾಲಕೃಷ್ಣನ್ ಮಾಸ್ಟರ್ 2,15,749 ಮತಗಳನ್ನು ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಅಶ್ವಿನಿ ಎಂ.ಎಲ್. 1,29,286 ಮತಗಳನ್ನು ಗಳಿಸಿ ತೃತೀಯ ಸ್ಥಾನದಲ್ಲಿದ್ದಾರೆ.