ಪ್ರಧಾನಿ ನರೇಂದ್ರ ಮೋದಿ ಜನ್ಮದಿನಕ್ಕೆ ಶುಭ ಹಾರೈಸಿದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ

ಹೈದರಾಬಾದ್: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ರವಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ.
ಪ್ರಧಾನಿ ಮೋದಿ ರವಿವಾರ 73 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಇತರ ಗಣ್ಯರು ಹಾಗೂ ರಾಜಕಾರಣಿಗಳು ಪ್ರಧಾನಿಗೆ ಶುಭಾಶಯಗಳನ್ನು ಕೋರಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ ಅವರ ಜನ್ಮದಿನದಂದು ನನ್ನ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯ ಸಿಗಲಿ ಎಂದು ಕಾಂಗ್ರೆಸ್ ಮುಖ್ಯಸ್ಥ ಖರ್ಗೆ ಅವರು X ನಲ್ಲಿ ತಿಳಿಸಿದ್ದಾರೆ.
X ನಲ್ಲಿನ ಪೋಸ್ಟ್ ನಲ್ಲಿ,ರಾಹುಲ್ ಗಾಂಧಿ, "ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು" ಎಂದು ಬರೆದಿದ್ದಾರೆ.
Wishing PM Narendra Modi a happy birthday.
— Rahul Gandhi (@RahulGandhi) September 17, 2023
Next Story







