Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಮ್ಮ ತೆರಿಗೆ, ನಮ್ಮ ಪಾಲು ಕೇಳಲು...

ನಮ್ಮ ತೆರಿಗೆ, ನಮ್ಮ ಪಾಲು ಕೇಳಲು ದಿಲ್ಲಿಗೆ ಬಂದಿದ್ದೇವೆ : ಡಿಸಿಎಂ ಡಿ ಕೆ ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ7 Feb 2024 11:57 AM IST
share
ನಮ್ಮ ತೆರಿಗೆ, ನಮ್ಮ ಪಾಲು ಕೇಳಲು ದಿಲ್ಲಿಗೆ ಬಂದಿದ್ದೇವೆ : ಡಿಸಿಎಂ ಡಿ ಕೆ ಶಿವಕುಮಾರ್

ಹೊಸದಿಲ್ಲಿ : ನಮ್ಮ ತೆರಿಗೆ, ನಮ್ಮ ಪಾಲು ಕೇಳಲು ಇಲ್ಲಿ ಬಂದಿದ್ದೇವೆ. ಈ ಹೋರಾಟ ಸದಾ ಕಾಲ ನೆನಪಿನಲ್ಲಿ ಉಳಿಯಲಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಕೇಂದ್ರ ಸರಕಾರದ ಅನುದಾನ ತಾರತಮ್ಯ ಖಂಡಿಸಿ ದಿಲ್ಲಿಯ ಜಂತರ್ ಮಂತರ್ ಮೈದಾನದಲ್ಲಿ ಕರ್ನಾಟಕ ಸರಕಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸುವ ಮುನ್ನ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.

“ಕೇಂದ್ರದ ಬಿಜೆಪಿ ಸರಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲವಾಗಿದೆ. ನಮ್ಮ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಹೇಳಿದ್ದರೂ ಇವರು ಕಿವಿಗೆ ಹಾಕಿಕೊಂಡಿಲ್ಲ. ಹೀಗಾಗಿ ನಾವು ಇಲ್ಲಿಗೆ ಬಂದು ಹೋರಾಟ ಮಾಡುತ್ತಿದ್ದೇವೆ.” ಎಂದರು.

ರಾಜ್ಯ ಸರಕಾರದ ಹೋರಾಟ ರಾಜಕೀಯ ಸ್ಟಂಟ್ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಬಿಜೆಪಿಯವರು ನಮ್ಮ ಹೋರಾಟದ ಬಗ್ಗೆ ಏನಾದರೂ ಹೇಳಲಿ. ನಮ್ಮಲ್ಲಿ ಯಾರೂ ಸಿನಿಮಾ ನಿರ್ದೇಶಕರು, ನಿರ್ಮಾಪಕರು ಇಲ್ಲ. ಅವರ ಪಕ್ಷದಲ್ಲೇ ನಿರ್ದೇಶಕರು, ನಿರ್ಮಾಪಕರು ಇದ್ದಾರೆ. ನಾವು ನೋಡುತ್ತಿದ್ದೇವೆ. ಅವರು ಭಾವನೆ ಮೇಲೆ ದೇಶ ತೆಗೆದುಕೊಂಡು ಹೋದರೆ, ನಾವು ಜನರ ಬದುಕಿನ ಬಗ್ಗೆ ಗಮನ ಹರಿಸುತ್ತಿದ್ದೇವೆ. ನಮ್ಮ ಗ್ಯಾರಂಟಿ ಬಗ್ಗೆ ಮಾತನಾಡುತ್ತಿದ್ದವರು ಬೇರೆ ರಾಜ್ಯಗಳಲ್ಲಿ ಅವರೇ ಗ್ಯಾರಂಟಿ ಘೋಷಣೆ ಮಾಡಿದ್ದು ಯಾಕೆ?” ಎಂದು ಪ್ರಶ್ನಿಸಿದರು.

ಬೇರೆ ರಾಜ್ಯಗಳ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ:

“ನಾನು ಬೇರೆ ರಾಜ್ಯಗಳ ವಿಚಾರವಾಗಿ ಮಾತನಾಡುವುದಿಲ್ಲ. ನಾವು ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ. ನಮ್ಮ ಪಾಲಿನ ಹಣ ನಾವು ಕೇಳುತ್ತಿದ್ದೇವೆ. ಬೇರೆ ರಾಜ್ಯಗಳು ಲಾಭ ಪಡೆಯಲಿ. ನಮಗೆ ಅದರ ಬಗ್ಗೆ ಆಕ್ಷೇಪವಿಲ್ಲ. ಕೇಂದ್ರ ಸರಕಾರ ಗುಜರಾತಿಗೆ ಗಿಫ್ಟ್ ಸಿಟಿ ಯೋಜನೆ ನೀಡಿದೆ. ನಮ್ಮ ರಾಜ್ಯಕ್ಕೂ ಒಂದು ಗಿಫ್ಟ್ ಸಿಟಿ ನೀಡಲಿ. ಎಲ್ಲಾ ರಾಜ್ಯಗಳಿಗೂ ಇಂತಹ ಯೋಜನೆ ನೀಡಲಿ. ಭಾರತ ಒಕ್ಕೂಟ ರಾಷ್ಟ್ರ. ನಮಗೂ ಯೋಜನೆ ನೀಡಿ ಎಂದು ನಾವು ಆಗ್ರಹಿಸುತ್ತಿದ್ದೇವೆ. ನಮಗೆ ಅವಕಾಶ ನೀಡಿದರೆ ನಾವು ಅವರಿಗಿಂತ ಹೆಚ್ಚು ಉತ್ತಮವಾಗಿ ಕೆಲಸ ಮಾಡಿ ತೋರಿಸುತ್ತೇವೆ. ನಮ್ಮ ರಾಜ್ಯದ ತೆರಿಗೆ, ಜನಸಂಖ್ಯೆಗೆ ಅನುಗುಣವಾಗಿ ನಮ್ಮ ಪಾಲಿನ ಅನುದಾನ ನೀಡಲಿ” ಎಂದು ತಿಳಿಸಿದರು.

“ಕೇರಳ ಸರಕಾರ ನಮ್ಮ ಮುಖ್ಯಮಂತ್ರಿಗಳಿಗೆ ಈ ವಿಚಾರವಾಗಿ ಪತ್ರ ಬರೆದಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಅವರು ನಮ್ಮ ನೆರೆ ರಾಜ್ಯ. ಅವರನ್ನು ನಾವು ಗೌರವಿಸುತ್ತೇವೆ. ಅವರು ದೇಶದ ಆರ್ಥಿಕತೆಗೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡಿದ್ದಾರೆ. ದೇಶದಲ್ಲಿ ಎಲ್ಲರೂ ಒಂದೇ, ಯಾರಿಗೆಲ್ಲಾ ಅನ್ಯಾಯವಾಗಿದೆ ಅವರು ಧ್ವನಿ ಎತ್ತಲಿ” ಎಂದು ತಿಳಿಸಿದರು.

ಪ್ರಧಾನಿ ಬಳಿ ಸಮಯ ಕೇಳಿದ್ದೇವೆ:

ಪ್ರಧಾನಮಂತ್ರಿ ಹಾಗೂ ಕೇಂದ್ರ ಸಚಿವರಿಗೆ ಮನವಿ ಮಾಡುತ್ತೀರಾ ಎಂದು ಕೇಳಿದಾಗ, “ಖಂಡಿತವಾಗಿಯೂ ಮಾಡುತ್ತೇವೆ. ನಮ್ಮ ಇಲಾಖೆ ವಿಚಾರವಾಗಿ ಮಾತನಾಡಲು ನಾವು ಪ್ರಧಾನಮಂತ್ರಿಗಳ ಬಳಿ ಸಮಯ ಕೇಳಿದ್ದೇವೆ. ಸಮಯ ನೀಡಬಹುದು” ಎಂದು ವಿಶ್ವಾಸ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X