Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಯನಾಡ್ ಭೇಟಿ ʼಸ್ಮರಣೀಯʼ ಎಂದು ಟ್ರೋಲ್‌...

ವಯನಾಡ್ ಭೇಟಿ ʼಸ್ಮರಣೀಯʼ ಎಂದು ಟ್ರೋಲ್‌ ಗೆ ಒಳಗಾದ ಶಶಿ ತರೂರ್

ಕಾಂಗ್ರೆಸ್‌ ಸಂಸದನ ಪ್ರತಿಕ್ರಿಯೆ ಏನು?

ವಾರ್ತಾಭಾರತಿವಾರ್ತಾಭಾರತಿ4 Aug 2024 4:13 PM IST
share
ವಯನಾಡ್ ಭೇಟಿ ʼಸ್ಮರಣೀಯʼ ಎಂದು ಟ್ರೋಲ್‌ ಗೆ ಒಳಗಾದ ಶಶಿ ತರೂರ್

ತಿರುವನಂತಪುರ: ಭೂಕುಸಿದಿಂದ ಜರ್ಜರಿತವಾಗಿರುವ ವಯನಾಡ್‍ಗೆ ನೀಡಿದ ಭೇಟಿಯನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು 'ಸ್ಮರಣೀಯ' ಎಂದು ಬಣ್ಣಿಸಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. 300ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಈ ದುರಂತ ಸ್ಥಳಕ್ಕೆ ಭೇಟಿ ನೀಡಿದ ತರೂರ್ ತಮ್ಮ ಅನುಭವ ಮತ್ತು ಕಚೇರಿ ವತಿಯಿಂದ ನಡೆಯುತ್ತಿರುವ ಪರಿಹಾರ ಕಾರ್ಯಗಳ ವಿವರಗಳನ್ನು ಹಂಚಿಕೊಂಡಿದ್ದಾರೆ.

ಬಿಜೆಪಿ ನಾಯಕ ಹಾಗೂ ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಸೇರಿದಂತೆ ಹಲವು ಮಂದಿ ಶಶಿ ತರೂರ್ ಬಳಸಿದ ಪದಗಳ ಆಯ್ಕೆ ಬಗ್ಗೆ ವ್ಯಾಪಕವಾಗಿ ಟೀಕಿಸಿರುವ ಹಿನ್ನೆಲೆಯಲ್ಲಿ ತರೂರ್ ಸ್ಪಷ್ಟನೆ ನೀಡಿದ್ದಾರೆ. ಇಂಥ ದುರಂತಮಯ ಘಟನೆ ಬಗ್ಗೆ ತರೂರ್ ಬಳಸಿದ ಪದಗಳು ಸೂಕ್ತವಲ್ಲ ಎಂದು ಬಣ್ಣಿಸಿದ್ದರು.

ಆದರೆ ಎಕ್ಸ್ ನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ತರೂರ್, "ಸ್ಮರಣೀಯ" ಎಂಬ ಪದದ ನಿಜವಾದ ಅರ್ಥ ಸ್ಮರಣೀಯ ಸ್ವರೂಪದ ಮರೆಯಲಾಗದ ಘಟನೆ ಎಂಬುದಾಗಿ ಸಮರ್ಥಿಸಿಕೊಂಡಿದ್ದಾರೆ.

ತರೂರ್ ಅವರು ಎಕ್ಸ್ ಪ್ಲಾಟ್‍ಫಾರಂನಲ್ಲಿ ಪೋಸ್ಟ್ ಮಾಡಿರುವ ವಿಡಿಯೊದಲ್ಲಿ ಪರಿಹಾರ ಸಾಮಗ್ರಿ ಸರಬರಾಜು ಮತ್ತು ಸಂತ್ರಸ್ತ ಜನತೆಯನ್ನು ಭೇಟಿ ಮಾಡಿದ್ದನ್ನು ಬಿಂಬಿಸಿದ್ದಾರೆ.

"ಟ್ರೋಲ್ ಮಾಡಿದ ಎಲ್ಲರಿಗೆ, 'ಸ್ಮರಣೀಯ ಎಂಬುದರ ಅರ್ಥ: ವಿಶೇಷ ಅಥವಾ ಮರೆಯಲಾಗದ ಸ್ವರೂಪದ ಘಟನೆಯನ್ನು ಸದಾ ನೆನಪಿನಲ್ಲಿ ಇಟ್ಟುಕೊಳ್ಳಬೇಕಾದ, ಇಟ್ಟುಕೊಳ್ಳಬಹುದಾದ ಘಟನೆ" ಎಂದು ಸ್ಪಷ್ಟನೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X