ಪ್ರಯಾಗ್‌ರಾಜ್ ಮಹಾಕುಂಭಮೇಳ, ಹಝ್ರತ್ ಮಖ್ದೂಮ್ ಸಾದತ್ ದರ್ಗಾಕ್ಕೆ ಸ್ಪೀಕರ್ ಯುಟಿ ಖಾದರ್ ಭೇಟಿ

ಅಲಹಾಬಾದ್: ಉತ್ತರ ಪ್ರದೇಶದ ಸ್ಪೀಕರ್ ಸತೀಶ್ ಮಹಾನಾ ಅವರ ಆಹ್ವಾನದ ಮೇರೆಗೆ ಪ್ರಯಾಗ್‌ರಾಜ್ ಮಹಾ ಕುಂಭಮೇಳ ಹಾಗೂ ಹಝ್ರತ್ ಮಖ್ದೂಮ್ ಸಾದತ್ ಚೌಧೋನ್ ಪೀರೋ (ರ.ಅ) ದರ್ಗಾ ಶರೀಫ್‌ಗೆ ಸ್ಪೀಕರ್ ಯು.ಟಿ. ಖಾದರ್ ಅವರು ಭೇಟಿ ನೀಡಿದರು.
ಉತ್ತರ ಪ್ರದೇಶ ವಿಧಾನಸಭೆಯ ಸಭಾಧ್ಯಕ್ಷರಾದ ಸತೀಶ್ ಮಹಾನಾ ಅವರ ಆಹ್ವಾನದ ಮೇರೆಗೆ ಪ್ರಯಾಗ್ ರಾಜ್ ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳ ಹಾಗೂ ಅಲಹಾಬಾದ್‌ನಲ್ಲಿರುವ ಹಝ್ರತ್ ಮಖ್ದೂಮ್ ಸಾದತ್ ಚೌಧೋನ್ ಪೀರೋ (ರ.ಅ) ದರ್ಗಾ ಶರೀಫ್‌ಗೆ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯುಟಿ ಖಾದರ್ ಅವರು ಭೇಟಿ ನೀಡಿ, ನಾಡಿನ ಒಳಿತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
Next Story







