ಪಾಕಿಸ್ತಾನದ ಪರ ಬೇಹುಗಾರಿಕೆ ಆರೋಪ : CRPF ಸಿಬ್ಬಂದಿ ಮೋತಿ ರಾಮ್ ಜಾಟ್ ನನ್ನು ಬಂಧಿಸಿದ ಎನ್ಐಎ

ಸಾಂದರ್ಭಿಕ ಚಿತ್ರ (PTI)
ಹೊಸದಿಲ್ಲಿ : ಪಾಕಿಸ್ತಾನದ ಗುಪ್ತಚರ ಅಧಿಕಾರಿಗಳೊಂದಿಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡ ಆರೋಪದಲ್ಲಿ ಎನ್ಐಎ ಅಧಿಕಾರಿಗಳು CRPF ಸಿಬ್ಬಂದಿಯನ್ನು ಬಂಧಿಸಿದ್ದಾರೆ.
ಮೋತಿ ರಾಮ್ ಜಾಟ್ ಬಂಧಿತ CRPF ಸಿಬ್ಬಂದಿ. ಈತ ಬೇಹುಗಾರಿಕೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಮತ್ತು 2023ರಿಂದ ಪಾಕಿಸ್ತಾನದ ಗುಪ್ತಚರ ಅಧಿಕಾರಿಗಳೊಂದಿಗೆ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದ. ಇದಕ್ಕೆ ಪ್ರತಿಯಾಗಿ ಪಾಕ್ ಅಧಿಕಾರಿಗಳಿಂದ ಹಣವನ್ನು ಪಡೆಯುತ್ತಿದ್ದ ಎಂದು ಎನ್ಐಎ ಹೇಳಿಕೆಯಲ್ಲಿ ತಿಳಿಸಿದೆ.
ದಿಲ್ಲಿಯಲ್ಲಿ ಮೋತಿ ರಾಮ್ ಜಾಟ್ನನ್ನು ಬಂಧಿಸಲಾಗಿದೆ. ಜೂನ್ 6ರವರೆಗೆ ಆತನನ್ನು NIA ಕಸ್ಟಡಿಗೆ ನೀಡಲಾಗಿದೆ.
Next Story





