ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ

Nitin Nabin (Photo: X)
ಜ. 20ರಂದು ಅಧಿಕಾರ ಸ್ವೀಕಾರ; ಪ್ರಧಾನಿ ಮೋದಿ ಭಾಗಿ
ಹೊಸದಿಲ್ಲಿ: ಬಿಜೆಪಿ ನಾಯಕ ನಿತಿನ್ ನಬಿನ್ ಅವರನ್ನು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಅವರು ಜನವರಿ 20ರಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಪಕ್ಷದ ಪ್ರಧಾನ ಕಚೇರಿಯಲ್ಲಿ ನಾಳೆ ಬೆಳಿಗ್ಗೆ 11.30 ಕ್ಕೆ ನಿಗದಿಯಾಗಿರುವ ಅಧಿಕಾರ ಹಸ್ತಾಂತರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಪಕ್ಷದ ಇತರ ಹಿರಿಯ ಸದಸ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಪಕ್ಷದ ರಾಷ್ಟ್ರೀಯ ಚುನಾವಣಾಧಿಕಾರಿ ಡಾ. ಕೆ. ಲಕ್ಷ್ಮಣ್ ಅವರು ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆಯಲ್ಲಿ, ಬಿಜೆಪಿಯ 36 ರಾಜ್ಯ ಘಟಕಗಳ ಪೈಕಿ 30 ರಾಜ್ಯಾಧ್ಯಕ್ಷರ ಆಯ್ಕೆ ಪೂರ್ಣಗೊಂಡ ಬಳಿಕ ರಾಷ್ಟ್ರೀಯ ಅಧ್ಯಕ್ಷರ ಚುನಾವಣಾ ಪ್ರಕ್ರಿಯೆ ನಡೆದಿದೆ ಎಂದು ತಿಳಿಸಿದ್ದಾರೆ. ಇದು ಪಕ್ಷದ ಸಂವಿಧಾನದಲ್ಲಿ ನಿರ್ದಿಷ್ಟಪಡಿಸಿರುವ ಕನಿಷ್ಠ 50 ಪ್ರತಿಶತ ಮಾನದಂಡವನ್ನು ಮೀರಿದೆ ಎಂದು ಅವರು ವಿವರಿಸಿದ್ದಾರೆ.
Next Story





