10ನೇ ಬಾರಿಗೆ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

ನಿತೀಶ್ ಕುಮಾರ್ (Photo credit: ANI)
ಪಟ್ನಾ: 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.
ಪಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಮುಹಮ್ಮದ್ ಅರಿಫ್ ಖಾನ್ ಅವರು ನಿತೀಶ್ ಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು.
ಇದೇ ವೇಳೆ ಬಿಜೆಪಿಯ ಹಿರಿಯ ನಾಯಕರಾದ ವಿಜಯ್ ಕುಮಾರ್ ಸಿನ್ಹಾ ಹಾಗೂ ಸಾಮ್ರಾಟ್ ಚೌಧರಿ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಇವರೊಂದಿಗೆ, ಬಿಜೆಪಿಯ ನಾಯಕರಾದ ವಿಜಯ್ ಚೌಧರಿ, ಬಿಜೇಂದ್ರ ಪ್ರಸಾದ್ ಯಾದವ್, ಶ್ರವಣ್ ಕುಮಾರ್, ಮಂಗಳ್ ಪಾಂಡೆ, ದಿಲೀಪ್ ಜೈಸ್ವಾಲ್ ಹಾಗೂ ಅಶೋಕ್ ಚೌಧರಿ ಕೂಡಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಜೆಡಿ(ಯು) ಪಕ್ಷದ ವಿಜಯ್ ಕುಮಾರ್ ಚೌಧರಿ, ಬಿಜೇಂದ್ರ ಪ್ರಸಾದ್ ಯಾದವ್, ಶ್ರವಣ್ ಕುಮಾರ್ ಮತ್ತು ಅಶೋಕ್ ಚೌಧರಿ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹಿತ ಬಿಜೆಪಿ ಮುಖಂಡರು ಸಮಾರಂಭದಲ್ಲಿ ಪಾಲ್ಗೊಂಡರು.
ಎನ್ಡಿಎ ಶಾಸಕಾಂಗ ಪಕ್ಷದ (ಎನ್ಡಿಎಎಲ್ಪಿ) ನಾಯಕನನ್ನಾಗಿ ನಿತೀಶ್ ಕುಮಾರ್ ಅವರನ್ನು ಬುಧವಾರ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು.





