Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಷ್ಯಾ ಕಚ್ಚಾ ತೈಲಕ್ಕೆ ರಿಯಾಯಿತಿ ಇಲ್ಲ:...

ರಷ್ಯಾ ಕಚ್ಚಾ ತೈಲಕ್ಕೆ ರಿಯಾಯಿತಿ ಇಲ್ಲ: ಹೆಚ್ಚಿನ ಬೆಲೆಗೆ ಖರೀದಿಸಲೇ ಬೇಕಾದ ಪರಿಸ್ಥಿತಿಯಲ್ಲಿ ಭಾರತ!

ವಾರ್ತಾಭಾರತಿವಾರ್ತಾಭಾರತಿ11 March 2026 7:20 AM IST
share
ರಷ್ಯಾ ಕಚ್ಚಾ ತೈಲಕ್ಕೆ ರಿಯಾಯಿತಿ ಇಲ್ಲ: ಹೆಚ್ಚಿನ ಬೆಲೆಗೆ ಖರೀದಿಸಲೇ ಬೇಕಾದ ಪರಿಸ್ಥಿತಿಯಲ್ಲಿ ಭಾರತ!

ಹೊಸದಿಲ್ಲಿ: ಇರಾನ್‌ ನಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಮಧ್ಯಪ್ರಾಚ್ಯದ ಉದ್ವಿಗ್ನತೆಯಿಂದ ಜಾಗತಿಕ ತೈಲ ಪೂರೈಕೆ ವ್ಯವಸ್ಥೆಯಲ್ಲಿ ಅಸ್ಥಿರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಭಾರತವು ರಷ್ಯಾದ ಕಚ್ಚಾ ತೈಲವನ್ನು ಮತ್ತೆ ಖರೀದಿಸಲು ಆರಂಭಿಸಿದೆ. ಆದರೆ ಈ ಬಾರಿ ಹಿಂದಿನಂತೆ ರಿಯಾಯಿತಿಯಲ್ಲಿ ಅಲ್ಲದೆ ಹೆಚ್ಚಿನ ಬೆಲೆಗೆ ಖರೀದಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಅಮೆರಿಕವು ಭಾರತಕ್ಕೆ ರಷ್ಯಾದ ತೈಲ ಖರೀದಿಸಲು 30 ದಿನಗಳ ತಾತ್ಕಾಲಿಕ ವಿನಾಯಿತಿ ನೀಡಿದ್ದರೂ, ಭಾರತೀಯ ಸಂಸ್ಕರಣಾಗಾರಗಳು ಈ ತೈಲವನ್ನು ಹೆಚ್ಚಿನ ಬೆಲೆಯಲ್ಲಿ ಪಡೆಯಬೇಕಾಗಿದೆ. ವರದಿಗಳ ಪ್ರಕಾರ, ಮಾರ್ಚ್ ಮತ್ತು ಏಪ್ರಿಲ್ ಆರಂಭದಲ್ಲಿ ಭಾರತೀಯ ಬಂದರುಗಳಿಗೆ ತಲುಪಲಿರುವ ಸರಕುಗಳಿಗೆ ರಷ್ಯಾದ ಯುರಲ್ಸ್ ಕಚ್ಚಾ ತೈಲವನ್ನು ಬ್ರೆಂಟ್ ದರಕ್ಕಿಂತ ಬ್ಯಾರೆಲ್‌ಗೆ 4 ಡಾಲರ್ ನಿಂದ ರಿಂದ 5 ಡಾಲರ್ ಪ್ರೀಮಿಯಂನಲ್ಲಿ ಮಾರಾಟ ಮಾಡಲಾಗುತ್ತಿದೆ.

ಇದು ಫೆಬ್ರವರಿಯಲ್ಲಿ ವ್ಯಾಪಾರವಾಗಿದ್ದ ಸರಕುಗಳಿಗೆ ನೀಡಲಾಗಿದ್ದ ಬ್ಯಾರೆಲ್‌ ಗೆ ಸುಮಾರು 13 ಡಾಲರ್ ರಿಯಾಯಿತಿಗೆ ಸಂಪೂರ್ಣ ವಿರುದ್ಧವಾಗಿದೆ.

ರಾಯಿಟರ್ಸ್ ವರದಿ ಪ್ರಕಾರ, ಯುದ್ಧ ಆರಂಭವಾಗುವ ಮೊದಲು ಫೆಬ್ರವರಿ 28ರಂದು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ರಷ್ಯಾದ ತೈಲದ ಎರಡು ಸರಕುಗಳನ್ನು ಬ್ಯಾರೆಲ್‌ಗೆ ಸುಮಾರು 13 ಡಾಲರ್ ರಿಯಾಯಿತಿಯಲ್ಲಿ ಖರೀದಿಸಿತ್ತು.

ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾದ ಪೂರೈಕೆ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಭಾರತೀಯ ಸಂಸ್ಕರಣಾಗಾರಗಳು ರಷ್ಯಾದ ಕಚ್ಚಾ ತೈಲವನ್ನು ದೊಡ್ಡ ಪ್ರಮಾಣದಲ್ಲಿ ಖರೀದಿಸುತ್ತಿವೆ. ರಾಯಿಟರ್ಸ್ ವರದಿ ಪ್ರಕಾರ, ಸರ್ಕಾರಿ ಸಂಸ್ಕರಣಾಗಾರಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಮತ್ತು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಗಳು ರಷ್ಯಾದ ತೈಲವನ್ನು ತ್ವರಿತವಾಗಿ ತಲುಪಿಸಲು ವ್ಯಾಪಾರಿಗಳೊಂದಿಗೆ ಮಾತುಕತೆ ನಡೆಸುತ್ತಿವೆ.

ಭಾರತೀಯ ಸರ್ಕಾರಿ ಸಂಸ್ಕರಣಾಗಾರಗಳು ಇಲ್ಲಿಯವರೆಗೆ ವ್ಯಾಪಾರಿಗಳಿಂದ ಸುಮಾರು 20 ಮಿಲಿಯನ್ ಬ್ಯಾರೆಲ್ ರಷ್ಯಾದ ಕಚ್ಚಾ ತೈಲವನ್ನು ಖರೀದಿಸಿವೆ ಎಂದು ವರದಿ ತಿಳಿಸಿದೆ.

ರಷ್ಯಾದ ತೈಲ ಮಾರಾಟದಲ್ಲಿ ತೊಡಗಿರುವ ವ್ಯಾಪಾರಿಯೊಬ್ಬರ ಪ್ರಕಾರ, ಭಾರತೀಯ ಸಂಸ್ಕರಣಾಗಾರಗಳು ಮಾರುಕಟ್ಟೆಗೆ ಮರಳಿದ್ದರೂ ಈಗ ಪ್ರಮುಖ ಸಮಸ್ಯೆ ಬೆಲೆಗಿಂತಲೂ ತೈಲ ಲಭ್ಯತೆ ಆಗಿದೆ.

ಇನ್ನೊಂದೆಡೆ, ಮಧ್ಯಪ್ರಾಚ್ಯದಲ್ಲಿ ಪೂರೈಕೆಯಲ್ಲಿ ಅಡಚಣೆ ಉಂಟಾದರೆ ಭಾರತದ ಇಂಧನ ಅಗತ್ಯಗಳನ್ನು ಪೂರೈಸಲು ರಷ್ಯಾ ಸಿದ್ಧವಾಗಿದೆ ಎಂದು ರಷ್ಯಾ ರಾಯಭಾರ ಕಚೇರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಧ್ಯಪ್ರಾಚ್ಯದ ಕಚ್ಚಾ ತೈಲ ಪೂರೈಕೆಯ ಕೊರತೆಯನ್ನು ಸರಿದೂಗಿಸಲು ಭಾರತೀಯ ಸಂಸ್ಕರಣಾಗಾರಗಳು ಈಗಾಗಲೇ ದೇಶದ ಕರಾವಳಿಯ ಬಳಿ ತೇಲುತ್ತಿರುವ ಹಡಗುಗಳಲ್ಲಿ ಇರುವ ರಷ್ಯಾದ ತೈಲವನ್ನು ಪಡೆಯಲು ಆರಂಭಿಸಿವೆ ಎಂದು ವರದಿ ತಿಳಿಸಿದೆ.

ಈ ನಡುವೆ ಅಮೆರಿಕದ ಖಜಾನೆ ಇಲಾಖೆ ಗುರುವಾರ ಭಾರತಕ್ಕೆ 30 ದಿನಗಳ ತಾತ್ಕಾಲಿಕ ವಿನಾಯಿತಿ ನೀಡಿದ್ದು, ಸಮುದ್ರದಲ್ಲಿ ಈಗಾಗಲೇ ಸಾಗಾಣಿಕೆಯಲ್ಲಿ ಇರುವ ರಷ್ಯಾದ ತೈಲವನ್ನು ಭಾರತೀಯ ಸಂಸ್ಕರಣಾಗಾರಗಳು ಖರೀದಿಸಲು ಅವಕಾಶ ಕಲ್ಪಿಸಿದೆ.

ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಮಾಸ್ಕೋಗೆ ಹಣಕಾಸಿನ ಹರಿವನ್ನು ನಿರ್ಬಂಧಿಸಲು ರಷ್ಯಾದ ತೈಲ ಆಮದುಗಳನ್ನು ಮಿತಿಗೊಳಿಸುವಂತೆ ಅಮೆರಿಕ ಹಲವು ತಿಂಗಳುಗಳಿಂದ ಭಾರತವನ್ನು ಒತ್ತಾಯಿಸುತ್ತಿತ್ತು.

“ಜಾಗತಿಕ ಮಾರುಕಟ್ಟೆಗೆ ತೈಲ ಹರಿವು ಮುಂದುವರಿಯಲು ಖಜಾನೆ ಇಲಾಖೆ ಭಾರತೀಯ ಸಂಸ್ಕರಣಾಗಾರಗಳಿಗೆ ರಷ್ಯಾದ ತೈಲ ಖರೀದಿಸಲು ತಾತ್ಕಾಲಿಕ 30 ದಿನಗಳ ವಿನಾಯಿತಿ ನೀಡುತ್ತಿದೆ” ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಹೇಳಿದ್ದಾರೆ.

ಈ ವಿನಾಯಿತಿ ಈಗಾಗಲೇ ಸಮುದ್ರದಲ್ಲಿರುವ ತೈಲಕ್ಕೆ ಮಾತ್ರ ಅನ್ವಯಿಸುತ್ತದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

“ಈ ಉದ್ದೇಶಪೂರ್ವಕ ಅಲ್ಪಾವಧಿಯ ಕ್ರಮವು ರಷ್ಯಾ ಸರ್ಕಾರಕ್ಕೆ ಮಹತ್ತರ ಆರ್ಥಿಕ ಲಾಭ ನೀಡುವುದಿಲ್ಲ, ಏಕೆಂದರೆ ಇದು ಈಗಾಗಲೇ ಸಮುದ್ರದಲ್ಲಿರುವ ತೈಲಕ್ಕೆ ಸಂಬಂಧಿಸಿದ ವಹಿವಾಟುಗಳಿಗೆ ಮಾತ್ರ ಅನುಮತಿ ನೀಡುತ್ತದೆ” ಎಂದು ಅವರು ತಿಳಿಸಿದ್ದಾರೆ.

ಇರಾನ್ ಸಂಘರ್ಷದ ಪರಿಣಾಮವಾಗಿ ರಷ್ಯಾದ ಕಚ್ಚಾ ತೈಲ ಆಮದುಗಳನ್ನು ಖರೀದಿಸಲು ಅನುಮೋದನೆ ನೀಡುವಂತೆ ಭಾರತವು ಡೊನಾಲ್ಡ್ ಟ್ರಂಪ್ ಆಡಳಿತವನ್ನು ಸಂಪರ್ಕಿಸಿತ್ತು ಎಂದು ರಾಯಿಟರ್ಸ್ ವರದಿ ತಿಳಿಸಿದೆ.

ಭಾರತವು ಪ್ರಸ್ತುತ ಸುಮಾರು 25 ದಿನಗಳ ಅಗತ್ಯವನ್ನು ಪೂರೈಸುವಷ್ಟು ಕಚ್ಚಾ ತೈಲದ ದಾಸ್ತಾನುಗಳನ್ನು ಹೊಂದಿದೆ. ದೇಶದ ಒಟ್ಟು ತೈಲ ಆಮದುಗಳಲ್ಲಿ ಸುಮಾರು 40 ಶೇಕಡಾ ಭಾಗ ಮಧ್ಯಪ್ರಾಚ್ಯದಿಂದ ಹಾರ್ಮುಜ್ ಜಲಸಂಧಿ ಮೂಲಕ ಬರುತ್ತದೆ.

2022ರಲ್ಲಿ ರಷ್ಯಾ ಉಕ್ರೇನ್ ಮೇಲೆ ದಾಳಿ ನಡೆಸಿದ ಬಳಿಕ ಭಾರತವು ರಷ್ಯಾದಿಂದ ಸಮುದ್ರ ಮಾರ್ಗದ ಮೂಲಕ ಕಚ್ಚಾ ತೈಲದ ಪ್ರಮುಖ ಖರೀದಿದಾರ ರಾಷ್ಟ್ರವಾಗಿತ್ತು. ಆದರೆ ಅಮೆರಿಕದ ಒತ್ತಡದ ಹಿನ್ನೆಲೆಯಲ್ಲಿ ಭಾರತವು ಜನವರಿಯಲ್ಲಿ ಖರೀದಿಗಳನ್ನು ಕಡಿಮೆ ಮಾಡಿತ್ತು. ಅದರ ನಂತರ ಅಮೆರಿಕವು ಭಾರತಕ್ಕೆ ವಿಧಿಸಿದ್ದ 50 ಶೇಕಡಾ ಸುಂಕವನ್ನು 18 ಶೇಕಡಕ್ಕೆ ಇಳಿಸಿತ್ತು.

Tags

Russiacrude oilIndiaIran Israel US War
share
ವಾರ್ತಾಭಾರತಿ
ವಾರ್ತಾಭಾರತಿ
Next Story
X