ಜೆಎನ್.1 ಪ್ರಕರಣಗಳ ಸಂಖ್ಯೆ 511ಕ್ಕೇರಿಕೆ
ಸಾಂದರ್ಭಿಕ ಚಿತ್ರ |Photo: PTI
ಹೊಸದಿಲ್ಲಿ: ದೇಶದಲ್ಲಿ ಕೋವಿಡ್ ನ ಉಪ ಪ್ರಬೇಧ ಜೆಎನ್.1 ಪ್ರಕರಣಗಳ ಸಂಖ್ಯೆ 511ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ 5 ಮಂದಿ ಮೃತಪಟ್ಟಿದ್ದಾರೆ ಹಾಗೂ 602 ಹೊಸ ಪ್ರಕರಣಗಳು ವರದಿಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4,440ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಬುಧವಾರ ಹೇಳಿದೆ.
11 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಜೆಎನ್.1 ಉಪಪ್ರಬೇಧದ ಪ್ರಕರಣಗಳು ಪತ್ತೆಯಾಗಿವೆ. ಜೆಎನ್.1ನ ಅತ್ಯಧಿಕ ಪ್ರಕರಣಗಳು ಕರ್ನಾಟಕದಲ್ಲಿ ದಾಖಲಾಗಿವೆ. ಕೇರಳದಲ್ಲಿ 148, ಗೋವಾದಲ್ಲಿ 47, ಗುಜರಾತ್ನಲ್ಲಿ 36, ಮಹಾರಾಷ್ಟ್ರದಲ್ಲಿ 32, ತಮಿಳುನಾಡಿನಲ್ಲಿ 26, ದಿಲ್ಲಿಯಲ್ಲಿ 15, ರಾಜಸ್ಥಾನದಲ್ಲಿ 4 , ತೆಲಂಗಾಣದಲ್ಲಿ 2, ಒಡಿಶಾ, ಹರ್ಯಾಣದಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ ಎಂದು ಸಚಿವಾಲಯ ತಿಳಿಸಿದೆ.
Next Story