Budget Session| ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಪ್ರಸ್ತಾಪ: ಸಂಸತ್ತಿನಲ್ಲಿ ಸತತ ಎರಡನೇ ದಿನವೂ ಮುಂದುವರಿದ ಗದ್ದಲ

Photo credit: PTI
ರಾಹುಲ್ ಗಾಂಧಿ ಭಾಷಣಕ್ಕೆ ಆಕ್ಷೇಪ
ಹೊಸದಿಲ್ಲಿ: 2020ರ ಭಾರತ-ಚೀನಾ ಲಡಾಖ್ ಘರ್ಷಣೆಯ ಕುರಿತು ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಯ ಆಯ್ದ ಭಾಗಗಳನ್ನು ಆಧರಿಸಿದ ಲೇಖನವನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮುಂದಾದ ಹಿನ್ನೆಲೆ ಸತತ ಎರಡನೇ ದಿನವೂ ಸಂಸತ್ತಿನಲ್ಲಿ ಗದ್ದಲ ಉಂಟಾಗಿದೆ.
ಮಂಗಳವಾರ ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಭಾರತ–ಚೀನಾ ಸಂಬಂಧಗಳ ಕುರಿತು ಲೇಖನ ಉಲ್ಲೇಖಿಸಲು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸ್ಪೀಕರ್ ಓಂ ಬಿರ್ಲಾ ಅವರು ಅವಕಾಶ ನಿರಾಕರಿಸಿದರು.
ಬಿಜೆಪಿ ಸಂಸದರು ರಾಹುಲ್ ಗಾಂಧಿ ಭಾಷಣಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರೆ, ಕಾಂಗ್ರೆಸ್ ಸಂಸದರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
Next Story





