ಪವನ್ ಖೇರಾಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್

ಪವನ್ ಖೇರಾ| Photo: PTI
Assam CM ಪತ್ನಿ ವಿರುದ್ಧ ಬಹು ಪಾಸ್ಪೋರ್ಟ್ ಆರೋಪ ಪ್ರಕರಣ
ಹೊಸದಿಲ್ಲಿ, ಮೇ 1: ಅಸ್ಸಾಂ ಪೊಲೀಸರು ದಾಖಲಿಸಿದ ಎಫ್ ಐ ಆರ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಬಹು ಪಾಸ್ಪೋರ್ಟ್ಗಳನ್ನು ಹೊಂದಿದ್ದಾರೆ ಎಂಬ ಆರೋಪವನ್ನು ಖೇರಾ ಮಾಡಿದ್ದರು. ಈ ಆರೋಪದ ಹಿನ್ನೆಲೆ ಅಸ್ಸಾಂ ಪೊಲೀಸರು ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.
ಈ ಪ್ರಕರಣದಲ್ಲಿ ಖೇರಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಗುವಾಹಟಿ ಹೈಕೋರ್ಟ್ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಖೇರಾ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಅತುಲ್ ಚಂದೂರ್ಕರ್ ಅವರ ಪೀಠವು ಅರ್ಜಿಯ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು.
Next Story




