Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೆಲಂಗಾಣದ ಜನತೆ ಮೋದಿಯ ಮಕ್ಮಲ್ ಟೋಪಿಗೆ...

ತೆಲಂಗಾಣದ ಜನತೆ ಮೋದಿಯ ಮಕ್ಮಲ್ ಟೋಪಿಗೆ ತಲೆ ಕೊಡುವುದಿಲ್ಲ: ಸಿಎಂ ಸಿದ್ದರಾಮಯ್ಯ

''ಕೆ.ಸಿ.ಆರ್ ಕರ್ನಾಟಕಕ್ಕೆ ಬಂದು 5 ಗ್ಯಾರಂಟಿಗಳ ಯಶಸ್ಸು ನೋಡಲಿ''

ವಾರ್ತಾಭಾರತಿವಾರ್ತಾಭಾರತಿ10 Nov 2023 8:10 PM IST
share
ತೆಲಂಗಾಣದ ಜನತೆ ಮೋದಿಯ ಮಕ್ಮಲ್ ಟೋಪಿಗೆ ತಲೆ ಕೊಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ತೆಲಂಗಾಣ(ಕಾಮರೆಡ್ಡಿ), ನ.10: ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯೆ ಆಗಿಲ್ಲ ಎಂದು ಆರೋಪಿಸಿದ್ದ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್(ಕೆ.ಸಿ.ಆರ್) ವಿರುದ್ಧ ವಾಗ್ದಾಳಿ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆ.ಸಿ.ಆರ್ ಅವರೆ ಕರ್ನಾಟಕ ರಾಜ್ಯಕ್ಕೆ ಬನ್ನಿ. 5 ಗ್ಯಾರಂಟಿ ಯೋಜನೆಗಳ ಯಶಸ್ಸು ನಿಮ್ಮ ಕಣ್ಣಿಂದ ನೋಡಿ, ಬಳಿಕ ಚರ್ಚೆಗೆ ಬನ್ನಿ ಎಂದು ಪಂಥಾಹ್ವಾನ ನೀಡಿದರು.

ಶುಕ್ರವಾರ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಕಾಮರೆಡ್ಡಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ‘ಹಿಂದುಳಿದ ವರ್ಗಗಳ ನಿರ್ಣಯ’ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ನಾವು ಐದು ಗ್ಯಾರಂಟಿಗಳನ್ನು 100 ದಿನಗಳಲ್ಲಿ ಜಾರಿ ಮಾಡಿದ್ದೇವೆ. ತೆಲಂಗಾಣದಲ್ಲೂ ಒಂದು ಬೋನಸ್ ಸೇರಿ ಆರು ಗ್ಯಾರಂಟಿಗಳು 100 ದಿನಗಳಲ್ಲಿ ಜಾರಿ ಆಗುತ್ತವೆ ಎಂದು ನುಡಿದರು.

ಬಿಜೆಪಿ ಮತ್ತು ಭಾರತ ರಾಷ್ಟ್ರೀಯ ಸಮಿತಿ(ಬಿಆರ್‍ಎಸ್) ಎರಡೂ ಒಂದೆ. ಬಿಆರ್‍ಎಸ್ ತೆಲಂಗಾಣದಲ್ಲಿ ಬಿಜೆಪಿಯ ಬಿ ಟೀಮ್ ಆಗಿ ಕೆಲಸ ಮಾಡುತ್ತಿದೆ. ತೆಲಂಗಾಣದ ಜನತೆ ಕೆ.ಸಿ.ಆರ್ ಮತ್ತು ಮೋದಿಯವರ ಮಕ್ಮಲ್ ಟೋಪಿಗೆ ಈ ಬಾರಿ ತಲೆ ಕೊಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಪ್ರಧಾನಿ ಮೋದಿ ಹಿಂದುಳಿದವರ ಉದ್ದಾರಕ್ಕೆ ಅವತಾರ ಎತ್ತಿದವರಂತೆ ಭಾಷಣ ಮಾಡುತ್ತಾರೆ. ಆದರೆ ಅವರು ಪ್ರಧಾನಿ ಆದ 9 ವರ್ಷಗಳಲ್ಲಿ ಹಿಂದುಳಿದವರಿಗೆ, ದಲಿತರ ಉದ್ದಾರಕ್ಕೆ ಯಾವ ಕಾರ್ಯಕ್ರಮಗಳನ್ನೂ ಜಾರಿ ಮಾಡಲಿಲ್ಲ. ಬದಲಿಗೆ ಹಿಂದುಳಿದವರು ಇನ್ನಷ್ಟು ಹಿಂದುಳಿಯುವಂತೆ ಮಾಡಿದ್ದಾರೆ ಎಂದು ಅವರು ಟೀಕಿಸಿದರು.

ಮೋದಿಯವರು ದೇಶದ ಶೇ.4ರಷ್ಟು ಮೇಲ್ವರ್ಗದ ಜನರ ಉದ್ದಾರಕ್ಕೆ ಮಾತ್ರ ಕೆಲಸ ಮಾಡುತ್ತಾರೆ. ನಾಗಪುರ ಈ ಶೇ.4ರಷ್ಟು ಜನರ ಪರವಾಗಿ ಹೇಳಿಕೊಟ್ಟ ಕಾರ್ಯಕ್ರಮವನ್ನು ಜಾರಿ ಮಾಡುವುದಷ್ಟೇ ಮೋದಿಯವರ ಕೆಲಸ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಕೆ.ಸಿ.ಆರ್ ಹತ್ತು ವರ್ಷ ಅಧಿಕಾರದಲ್ಲಿದ್ದೂ ತೆಲಂಗಾಣವನ್ನು ಅಭಿವೃದ್ಧಿ ಮಾರ್ಗದಲ್ಲಿ ಕೊಂಡೊಯ್ಯದೆ ಭ್ರಷ್ಟಾಚಾರದಲ್ಲಿ ಮುಳುಗಿಸಿದರು. ಮೋದಿ ಈ ಹತ್ತು ವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನು ಹಳ್ಳ ಹಿಡಿಸಿದರು. ಇದನ್ನು ಕರ್ನಾಟಕದ ಜನತೆ ಅರ್ಥ ಮಾಡಿಕೊಂಡರು. ಜಾಗೃತರಾದರು. ತೆಲಂಗಾಣದ ಜನತೆಯೂ ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಮೋದಿ ಜಾರಿಗೆ ತಂದಿರುವ ಎಲ್ಲ ಜನದ್ರೋಹಿ, ಜನ ವಿರೋಧಿ ಯೋಜನೆಗಳಿಗೆ ಕೆ.ಸಿ.ಆರ್ ಮತ್ತು ಬಿ.ಆರ್.ಎಸ್ ಬೆಂಬಲ ನೀಡಿ ತಾವೂ ಜನವಿರೋಧಿ ಆಗಿದ್ದಾರೆ. ಕೆ.ಸಿ.ಆರ್ ಚುನಾವಣೆಯಲ್ಲಿ ಖರ್ಚು ಮಾಡುವ ಹಣ ಪಾಪದ ಹಣ. ಆದರೆ ತೆಲಂಗಾಣ ಜನತೆ ಬಿಆರ್‍ಎಸ್ ಅನ್ನು ಸೋಲಿಸಲು ಸ್ಪಷ್ಟ ತೀರ್ಮಾನ ಮಾಡಿದ್ದಾರೆ. ಬಿಜೆಪಿ ತೆಲಂಗಾಣದಲ್ಲಿ 5 ಸೀಟು ಗೆದ್ದರೆ ಅದೇ ಹೆಚ್ಚು. ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರೇವಂತ್ ರೆಡ್ಡಿ ಸ್ಪರ್ಧಿಸಿರುವ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ನರೇಂದ್ರ ಮೋದಿ ನೂರು ಬಾರಿ ತೆಲಂಗಾಣಕ್ಕೆ ಪ್ರಚಾರಕ್ಕೆ ಬಂದರೂ ಇಲ್ಲಿ ಬಿಜೆಪಿ ಗೆಲ್ಲಲ್ಲ. ಬಿಜೆಪಿ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳುತ್ತಾರೆ. ಮೋದಿ ಕರ್ನಾಟಕಕ್ಕೂ 48 ಬಾರಿ ಚುನಾವಣಾ ಪ್ರಚಾರಕ್ಕೆ ಬಂದಿದ್ದರು. ಅವರು ಪ್ರಚಾರ ಮಾಡಿದ ಕ್ಷೇತ್ರಗಳಲ್ಲಿ ಬಿಜೆಪಿ ಹೀನಾಯವಾಗಿ ಸೋತಿದೆ. ನರೇಂದ್ರ ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನು ನಾನು ಹಿಂದೆಂದೂ ಕಂಡಿಲ್ಲ ಎಂದು ಸಿದ್ದರಾಮಯ್ಯ ಕಿಡಿಗಾರಿದರು.

ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರೇವಂತ್ ರೆಡ್ಡಿ ಸೇರಿದಂತೆ ಹಲವು ನಾಯಕರು ವೇದಿಕೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X