ರಶ್ಯ ಅಧ್ಯಕ್ಷ ಪುಟಿನ್ಗೆ ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ

Photo credit: X/@narendramodi
ಹೊಸದಿಲ್ಲಿ: ಎರಡು ದಿನಗಳ ಭಾರತ ಭೇಟಿಗೆ ಆಗಮಿಸಿರುವ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ರಶ್ಯನ್ ಭಾಷೆಯ ಭಗವದ್ಗೀತೆ ಆವೃತ್ತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.
ತಮ್ಮಿಬ್ಬರ ನಡುವಿನ ಮಾತುಕತೆ ವೇಳೆಯ ಭಾವಚಿತ್ರವನ್ನು ಪ್ರಧಾನಿ ಮೋದಿ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ.
"ಭಗವದ್ಗೀತೆಯ ಒಂದು ಪ್ರತಿಯನ್ನು ರಶ್ಯ ಅಧ್ಯಕ್ಷ ಪುಟಿನ್ ಅವರಿಗೆ ಉಡುಗೊರೆಯಾಗಿ ನೀಡಿದೆ. ಭಗವದ್ಗೀತೆಯಲ್ಲಿನ ಬೋಧನೆ ವಿಶ್ವಾದ್ಯಂತ ಇರುವ ಕೋಟ್ಯಂತರ ಮಂದಿಗೆ ಸ್ಫೂರ್ತಿದಾಯಕವಾಗಿದೆ" ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯ ಆಹ್ವಾನದ ಮೇರೆಗೆ 23ನೇ ಭಾರತ-ರಶ್ಯ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ಧಾರೆ. ಇಂದು ಉಭಯ ನಾಯಕರ ನಡುವೆ ನಡೆಯಲಿರುವ ದ್ವಿಪಕ್ಷೀಯ ಮಾತುಕತೆಯ ವೇಳೆ 10ಕ್ಕೂ ಹೆಚ್ಚು ಒಪ್ಪಂದಗಳು ಹಾಗೂ 15ಕ್ಕೂ ಹೆಚ್ಚು ಒಡಂಬಡಿಕೆ (MOU) ಪತ್ರಗಳಿಗೆ ಸಹಿ ಹಾಕಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.







