Assam| 6,957 ಕೋಟಿ ರೂ. ವೆಚ್ಚದ ಕಾಝಿರಂಗ ಕಾರಿಡಾರ್ಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

Photo Credit: PTI
ಎರಡು ಅಮೃತ್ ಭಾರತ್ ರೈಲುಗಳಿಗೆ ಹಸಿರು ನಿಶಾನೆ
ಗುವಾಹಟಿ: 6,957 ಕೋಟಿ ರೂ. ವೆಚ್ಚದ ಕಾಝಿರಂಗ ಕಾರಿಡಾರ್ಗೆ ರವಿವಾರ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದರು. ಇದಲ್ಲದೆ ವಿಡಿಯೊ ಕಾನ್ಫರೆನ್ಸ್ ಮೂಲಕ ಅಸ್ಸಾಂನ ನಾಗಾಂವ್ ಜಿಲ್ಲೆಯಿಂದ ಎರಡು ಅಮೃತ್ ಭಾರತ್ ರೈಲುಗಳಿಗೆ ಚಾಲನೆ ನೀಡಿದರು.
ಅಸ್ಸಾಂಗೆ ಎರಡು ದಿನಗಳ ಭೇಟಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಗುವಾಹಟಿಯಿಂದ ತಮ್ಮ ಅಂತಿಮ ಹಂತದ ಪ್ರವಾಸದ ಭಾಗವಾಗಿ ಕಾಝಿರಂಗ್ಗೆ ಆಗಮಿಸಿ, ಕಾಝಿರಂಗ್ ಯೋಜನೆಗೆ ಶಿಲಾನ್ಯಾಸ ನೆರವೇರಿಸಿದರು.
ಕಾಝಿರಂಗ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತಾರಣ್ಯದಲ್ಲಿ ವನ್ಯಜೀವಿಗಳ ಸುರಕ್ಷಿತ ಓಡಾಟವನ್ನು ಖಾತರಿಗೊಳಿಸುವ, ರಾಷ್ಟ್ರೀಯ ಹೆದ್ದಾರಿ 715ರಲ್ಲಿ ರಸ್ತೆ ಅಪಘಾತಗಳನ್ನು ತಗ್ಗಿಸುವ, ಪರಿಸರ ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಾಗೂ ಸ್ಥಳೀಯ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಈ ಕಾರಿಡಾರ್ ಯೋಜನೆ ಹೊಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Next Story





