Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಾನು ಪತ್ರಿಕಾಗೋಷ್ಠಿ ನಡೆಸದೇ...

ತಾನು ಪತ್ರಿಕಾಗೋಷ್ಠಿ ನಡೆಸದೇ ಇರುವುದಕ್ಕೆ ಕಾರಣ ತಿಳಿಸಿದ ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ17 May 2024 12:43 PM IST
share
ತಾನು ಪತ್ರಿಕಾಗೋಷ್ಠಿ ನಡೆಸದೇ ಇರುವುದಕ್ಕೆ ಕಾರಣ ತಿಳಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯೇಕೆ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ನಡೆಸಿದಷ್ಟು ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಿಲ್ಲ ಹಾಗೂ ಕೆಲವೇ ಸಂದರ್ಶನಗಳನ್ನು ನೀಡುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಪ್ರಧಾನಿ ಮೋದಿ, ಮಾಧ್ಯಮಗಳನ್ನು ನಿರ್ದಿಷ್ಟ ಬಗೆಯಲ್ಲಿ ಬಳಕೆ ಮಾಡಿಕೊಳ್ಳಲಾಗುತ್ತಿದೆ ಹಾಗೂ ನನಗೆ ಆ ದಾರಿಯಲ್ಲಿ ಹೋಗಲು ಇಷ್ಟವಿಲ್ಲ ಎಂದು ಹೇಳಿದ್ದಾರೆ.

India Today ಸುದ್ದಿ ಸಂಸ್ಥೆಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಪ್ರಧಾನಿ ಮೋದಿ, ನಾನೆಂದೂ ಸಂದರ್ಶನಗಳನ್ನು ನೀಡಲು ನಿರಾಕರಿಸಿಲ್ಲ ಎಂದು ಹೇಳಿದ್ದು, ಮಾಧ್ಯಮಗಳ ಹೊಣೆಗಾರಿಕೆ ಪಾತ್ರದಲ್ಲಿನ ಬದಲಾವಣೆ ಹಾಗೂ ಸಾರ್ವಜನಿಕರನ್ನು ತಲುಪಲು ಇರುವ ಹಲವು ಸಂವಹನ ಮಾರ್ಗಗಳ ಕುರಿತು ಒತ್ತಿ ಹೇಳಿದ್ದಾರೆ. ಇಂದಿನ ಮಾಧ್ಯಮಗಳು ಈ ಹಿಂದಿನಂತಿಲ್ಲ ಎಂದೂ ಅವರು ಅಭಿಪ್ರಾಯ ಪಟ್ಟಿದ್ದಾರೆ.

“ನಾನು ಕಠಿಣ ಪರಿಶ್ರಮ ಪಡಬೇಕಿದೆ. ನಾನು ಬಡವರ ಮನೆಗಳಿಗೆ ಹೋಗಬೇಕಿದೆ. ನಾನು ವಿಜ್ಞಾನ ಭವನದಲ್ಲಿ ರಿಬ್ಬನ್ ಕತ್ತರಿಸಿ, ನನ್ನ ಭಾವಚಿತ್ರ ತೆಗೆಸಿಕೊಳ್ಳಬಹುದು. ಆದರೆ, ನಾನು ಹಾಗೆ ಮಾಡುವುದಿಲ್ಲ. ನಾನು ಜಾರ್ಖಂಡ್ ನ ಸಣ್ಣ ಜಿಲ್ಲೆಗೆ ಹೋಗುತ್ತೇನೆ ಹಾಗೂ ಅಲ್ಲಿ ಸಣ್ಣ ಯೋಜನೆಯ ಜಾರಿಗಾಗಿ ಕೆಲಸ ಮಾಡುತ್ತೇನೆ” ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನಾನು ಹೊಸ ಶ್ರಮ ಸಂಸ್ಕೃತಿಯನ್ನು ಪರಿಚಯಿಸಿದ್ದೇನೆ ಎಂದು ಪ್ರತಿಪಾದಿಸಿದ ಪ್ರಧಾನಿ ಮೋದಿ, “ಒಂದು ವೇಳೆ ಆ ಸಂಸ್ಕೃತಿ ಸರಿಯೆನಿಸಿದರೆ ಅದನ್ನು ಮಾಧ್ಯಮಗಳು ಸೂಕ್ತವಾಗಿ ಮುಂದಿಡಲಿ, ಇಲ್ಲದಿದ್ದರೆ ಹಾಗೆ ಮಾಡುವುದು ಬೇಡ” ಎಂದೂ ಹೇಳಿದ್ದಾರೆ.

ಮಾಧ್ಯಮವಿಂದು ಪ್ರತ್ಯೇಕ ಘಟಕವಾಗಿ ಉಳದಿಲ್ಲ ಎಂಬುದನ್ನೂ ಪ್ರಧಾನಿ ಮೋದಿ ಒತ್ತಿ ಹೇಳಿದ್ದಾರೆ.

“ಇದಕ್ಕೂ ಮುನ್ನ, ನಾನು ಆಜ್ ತಕ್ ನೊಂದಿಗೆ ಮಾತನಾಡುತ್ತಿದ್ದೆ. ಆದರೆ, ಈಗ ವೀಕ್ಷಕರಿಗೆ ನಾನು ಯಾವ ನಿರೂಪಕನೊಂದಿಗೆ ಮಾತನಾಡುತ್ತಿದ್ದೇನೆ ಎಂಬುದು ತಿಳಿಯುತ್ತದೆ. ಇಂದು ಮಾಧ್ಯಮಗಳು ಪ್ರತ್ಯೇಕ ಘಟಕಗಳಾಗಿ ಉಳಿದಿಲ್ಲ. ಇನ್ನಿತರ ಹಲವರಂತೆ, ನೀವೂ (ನಿರೂಪಕರು) ಕೂಡಾ ನಿಮ್ಮ ನಿಲುವುಗಳನ್ನು ಜನರಿಗೆ ತಿಳಿಯುವಂತೆ ಮಾಡುತ್ತಿದ್ದೀರಿ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಈ ಹಿಂದೆ ಮಾಧ್ಯಮಗಳು ಮಾತ್ರ ಸಂಹವನದ ಮೂಲಗಳಾಗಿದ್ದವು. ಆದರೀಗ ಹಲವಾರು ಸಂವಹನ ಮಾಧ್ಯಮಗಳು ಲಭ್ಯವಿವೆ” ಎಂದೂ ಅವರು ಅಭಿಪ್ರಾಯ ಪಟ್ಟಿದ್ದಾರೆ.

“ಇಂದು ನೀವೇನಾದರೂ ಸಾರ್ವಜನಿಕರೊಂದಿಗೆ ಮಾತನಾಡಬೇಕಾದರೆ, ಸಂಹವನವು ದ್ವಿಮುಖವಾಗಿದೆ. ಇಂದು ಸಾರ್ವಜನಿಕರು ಮಾಧ್ಯಮಗಳಿಲ್ಲದೆಯೂ ತಮ್ಮ ಧ್ವನಿ ತಿಳಿಯುವಂತೆ ಮಾಡಬಹುದು. ಉತ್ತರಿಸಬೇಕಾದ ವ್ಯಕ್ತಿಯೂ ಕೂಡಾ ಮಾಧ್ಯುಮಗಳಿಲ್ಲದೆ ತನ್ನ ನಿಲುವುಗಳನ್ನು ಚೆನ್ನಾಗಿ ವ್ಯಕ್ತಪಡಿಸಬಹುದು” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X