Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಪ ಚುನಾವಣಾ ಆಯುಕ್ತರಾಗಿ ಪ್ರಕಾಶ್ ರಾಜ್...

ಉಪ ಚುನಾವಣಾ ಆಯುಕ್ತರಾಗಿ ಪ್ರಕಾಶ್ ರಾಜ್ ಪುರೋಹಿತ್ ನೇಮಕ

ವಾರ್ತಾಭಾರತಿವಾರ್ತಾಭಾರತಿ11 Oct 2026 8:32 PM IST
share
ಉಪ ಚುನಾವಣಾ ಆಯುಕ್ತರಾಗಿ ಪ್ರಕಾಶ್ ರಾಜ್ ಪುರೋಹಿತ್ ನೇಮಕ

ಹೊಸದಿಲ್ಲಿ, ಅ. 11: ಕೇಂದ್ರ ಸರಕಾರ ಶನಿವಾರ ನಡೆಸಿದ ಉನ್ನತ ಮಟ್ಟದ ಅಧಿಕಾರಿಗಳ ವರ್ಗಾವಣೆಯ ಭಾಗವಾಗಿ ಹಿರಿಯ ಅಧಿಕಾರಿ ಪ್ರಕಾಶ್ ರಾಜ್ ಪುರೋಹಿತ್ ಅವರನ್ನು ಉಪ ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

ರಾಜಸ್ಥಾನ ಕೇಡರ್‌ನ 2010ರ ಬ್ಯಾಚ್‌ನ ಐಎಎಸ್ ಅಧಿಕಾರಿ ಪ್ರಕಾಶ್ ರಾಜ್ ಪುರೋಹಿತ್ ಅವರನ್ನು ಸಂಜಯ್ ಕುಮಾರ್ ಅವರ ಸ್ಥಾನಕ್ಕೆ 2030ರ ಎಪ್ರಿಲ್ 8ರವರೆಗಿನ ಅವಧಿಗೆ ಈ ಹುದ್ದೆಗೆ ನೇಮಿಸಲಾಗಿದೆ ಎಂದು ಸಿಬ್ಬಂದಿ ಸಚಿವಾಲಯ ತಿಳಿಸಿದೆ.

1996ರ ಬ್ಯಾಚ್‌ ನ ಇಂಡಿಯನ್ ಟೆಲಿಕಾಂ ಸೇವೆಯ ಅಧಿಕಾರಿ ವಿವೇಕ್ ಖರೆ ಅವರು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯ ಜಂಟಿ ಕಾರ್ಯದರ್ಶಿಯಾಗಲಿದ್ದಾರೆ ಎಂದು ಆದೇಶ ತಿಳಿಸಿದೆ.

ಸಚಿವ ಸಂಪುಟದ ನೇಮಕಾತಿ ಸಮಿತಿ (ಎಸಿಸಿ) ಜಂಟಿ ಕಾರ್ಯದರ್ಶಿ ಮತ್ತು ತತ್ಸಮಾನ ಮಟ್ಟದಲ್ಲಿ 27 ನಾಗರಿಕ ಸೇವಾ ಅಧಿಕಾರಿಗಳ ನೇಮಕಾತಿಗೆ ಅನುಮೋದನೆ ನೀಡಿದೆ.

ರವಿಶಂಕರ್, ಚಿತ್ತರಂಜನ್ ದಾಸ್, ಪಿ. ಮನೋಜ್ ಕುಮಾರ್ ಮತ್ತು ಅಭಿಷೇಕ್ ಭಗೋಟಿಯಾ ಅವರನ್ನು ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ.

ಮುಹಮ್ಮದ್ ವೈ. ಸಫೀರುಲ್ಲಾ ಕೆ. ಮತ್ತು ರಿತು ಶರ್ಮಾ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿಗಳಾಗಿದ್ದಾರೆ.

ಅಸ್ಸಾಂ–ಮೇಘಾಲಯ ಕೇಡರ್‌ನ 2009ರ ಬ್ಯಾಚ್‌ನ ಐಎಎಸ್ ಅಧಿಕಾರಿ ವರ್ಣಾಲಿ ಡೇಕಾ ಅವರನ್ನು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಮೋರೆ ಆಶಿಶ್ ಮಾಧವ್ ರಾವ್ ಅವರು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಹೆಚ್ಚುವರಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಲಿದ್ದಾರೆ (ಜಂಟಿ ಕಾರ್ಯದರ್ಶಿ ಮಟ್ಟ).

ನಿಖಿಲ್ ವರ್ಮಾ ಅವರನ್ನು ದಿಲ್ಲಿಯ ವಿದೇಶಿ ವ್ಯಾಪಾರದ ಹೆಚ್ಚುವರಿ ಮಹಾನಿರ್ದೇಶಕರಾಗಿ, ತನ್ವಿ ಸುಂದ್ರಿಯಾಲ್ ಅವರನ್ನು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ಮತ್ತು ಇಂದ್ರಜಿತ್ ಸಿಂಗ್ ಅವರನ್ನು ಸಂಸ್ಕೃತಿ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹಿರಿಯ ಐಎಎಸ್ ಅಧಿಕಾರಿ ತಾಂಬೋಳಿ ಅಯ್ಯಜ್ ಫಕೀರಬಾಯಿ ಅವರನ್ನು ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ (ಐಆರ್‌ಡಿಎಐ) ಕಾರ್ಯಕಾರಿ ನಿರ್ದೇಶಕರಾಗಿ (ಜಂಟಿ ಕಾರ್ಯದರ್ಶಿ ಮಟ್ಟ), ರಾಜೇಶ್ ಮಲಿಕ್ ಅವರನ್ನು ಭಾರತೀಯ ಆಹಾರ ನಿಗಮದ (ಎಫ್‌ಸಿಐ) ಕಾರ್ಯಕಾರಿ ನಿರ್ದೇಶಕರಾಗಿ ಮತ್ತು ನವೀನ್ ಅಗರ್ವಾಲ್ ಅವರನ್ನು ಕಾನೂನು ವ್ಯವಹಾರಗಳ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಬ್ರಿಜೇಶ್ ಪಾಂಡೆ ಅವರನ್ನು ರಾಜಧಾನಿ ಅಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ, ಎಂ. ರಾಮಚಂದ್ರುಡು ಅವರನ್ನು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ಮತ್ತು ಸೋನಿಯಾ ಪಂತ್ ಅವರನ್ನು ನೀತಿ ಆಯೋಗದ ಸಲಹೆಗಾರರಾಗಿ (ಜಂಟಿ ಕಾರ್ಯದರ್ಶಿ ಮಟ್ಟ) ನೇಮಿಸಲಾಗಿದೆ.

ನಿತಿನ್ ಕುಮಾರ್ ಅವರನ್ನು ಕೇಂದ್ರ ವಿಚಕ್ಷಣಾ ಆಯೋಗದ (ಸಿವಿಸಿ) ಹೆಚ್ಚುವರಿ ಕಾರ್ಯದರ್ಶಿಯಾಗಿ (ಜಂಟಿ ಕಾರ್ಯದರ್ಶಿ ಮಟ್ಟ), ಸಿ. ಮುರುಗನ್ ಅವರನ್ನು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ, ರಜನೇಶ್ ಕುಮಾರ್ ತೋಮರ್ ಅವರನ್ನು ನ್ಯಾಷನಲ್ ಹೈವೇಸ್ ಲಾಜಿಸ್ಟಿಕ್ ಮ್ಯಾನೇಜ್‌ಮೆಂಟ್ ಲಿಮಿಟೆಡ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಮತ್ತು ನಿಷ್ಠಾ ತಿವಾರಿ ಅವರನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಅಡಿಯಲ್ಲಿ ಬರುವ ‘ಅಧಿಸೂಚನೆಗೆ ಒಳಪಡದ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ಮತ್ತು ಕಲ್ಯಾಣ ಮಂಡಳಿ’ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನೇಮಿಸಲಾಗಿದೆ.

ಮನೀಷಾ ತ್ರಿಘಾಟಿಯಾ ಅವರು ನಗರಾಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ, ಅವಿನಾಶ್ ಜೈನ್ ಅವರು ಜಲಸಂಪನ್ಮೂಲ, ನದಿ ಅಭಿವೃದ್ಧಿ ಮತ್ತು ಗಂಗಾ ಪುನರುಜ್ಜೀವನ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ, ಪವನ್ ಕುಮಾರ್ ಅವರು ರಾಷ್ಟ್ರೀಯ ನದಿ ಸಂರಕ್ಷಣಾ ನಿರ್ದೇಶನಾಲಯದ ಜಂಟಿ ಕಾರ್ಯದರ್ಶಿಯಾಗಿ ಮತ್ತು ಅನಿತಾ ಶಾ ಅಕೇಲ್ಲಾ ಅವರು ರಾಷ್ಟ್ರೀಯ ಮಹಿಳಾ ಆಯೋಗದ ಜಂಟಿ ಕಾರ್ಯದರ್ಶಿಯಾಗಲಿದ್ದಾರೆ.

Tags

Prakash RajpurohitDeputy Election Commissioner
share
ವಾರ್ತಾಭಾರತಿ
ವಾರ್ತಾಭಾರತಿ
Next Story
X