ದೇಶದ ಶಿಕ್ಷಣ ವ್ಯವಸ್ಥೆಯನ್ನು ಆರೆಸ್ಸೆಸ್ ಕಬಳಿಸಿ, ಒಳಗಿನಿಂದಲೇ ಟೊಳ್ಳಾಗಿಸಿದೆ : ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೆ ರಾಹುಲ್ ಗಾಂಧಿ ವಾಗ್ದಾಳಿ

ರಾಹುಲ್ ಗಾಂಧಿ |Photo Credit : PTI
ಹೊಸದಿಲ್ಲಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ವಿದ್ಯಾರ್ಥಿಗಳ "ವಿಜಯ" ಎಂದು ಕರೆದಿರುವ ರಾಹುಲ್ ಗಾಂಧಿ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಪೆಲ್ಲೆಟ್ ಗನ್ ಬಳಸಿರುವುದಕ್ಕೆ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಒಂದು ಕಾಲದಲ್ಲಿ ವಿಶ್ವದ ಅತ್ಯುತ್ತಮ ಶಿಕ್ಷಣ ವ್ಯವಸ್ಥೆಗಳಲ್ಲಿ ಒಂದೆಂದು ಪರಿಗಣಿಸಲಾಗಿದ್ದ ಭಾರತದ ಶಿಕ್ಷಣ ವ್ಯವಸ್ಥೆಯನ್ನು ಆರೆಸ್ಸೆಸ್ ಕಳೆದ ಹಲವು ವರ್ಷಗಳಿಂದ ಕಬಳಿಸಿ ದುರ್ಬಲಗೊಳಿಸಿದೆ. ದೇಶದ ಹೆಮ್ಮೆಯಾಗಿದ್ದ ಶಿಕ್ಷಣ ವ್ಯವಸ್ಥೆಯನ್ನು ಮರುನಿರ್ಮಿಸಲು ಕೇಂದ್ರ ಸರಕಾರ ಕೇವಲ ಹೇಳಿಕೆಗಳಲ್ಲ, ಸ್ಪಷ್ಟ ಮತ್ತು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
"ನಮ್ಮದೇ ಆದ ಪಡೆಗಳು ಭಾರತದ ಭವಿಷ್ಯವಾಗಿರುವ ಯುವಕರಿಗೆ ಗುಂಡು ಹಾರಿಸುವುದನ್ನು ನಾವು ಒಪ್ಪುವುದಿಲ್ಲ. ಆದ್ದರಿಂದ ಸಂಸತ್ತಿನಲ್ಲಿ ನಾವು ಈ ಬಗ್ಗೆ ಚರ್ಚಿಸಲಿದ್ದೇವೆ. ವಿದ್ಯಾರ್ಥಿಗಳ ಮೇಲಿನ ಕ್ರಮಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.




