Uttar Pradesh | ಬೆಂಗಾವಲು ವಾಹನಗಳ ನಡುವೆ ಢಿಕ್ಕಿ: ರಾಹುಲ್ ಗಾಂಧಿ ಅಪಾಯದಿಂದ ಪಾರು

Photo Credit : indiatoday.in
ಸುಲ್ತಾನ್ಪುರ: ಉತ್ತರ ಪ್ರದೇಶದ ಸುಲ್ತಾನ್ಪುರ ಜಿಲ್ಲೆಯಲ್ಲಿ ಪೂರ್ವಾಂಚಲ್ ಎಕ್ಸ್ಪ್ರೆಸ್ವೇಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಬೆಂಗಾವಲು ವಾಹನಗಳ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿದೆ. ಲಕ್ನೋದಿಂದ ಸುಲ್ತಾನ್ಪುರದತ್ತ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಹಲಿಯಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಎಕ್ಸ್ಪ್ರೆಸ್ವೇಯ 89.5 ಕಿ.ಮೀ. ಮೈಲಿಗಲ್ಲಿನ ಸಮೀಪ ಈ ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ರಾಹುಲ್ ಗಾಂಧಿ ಅವರ ಕಾರಿನ ಹಿಂದೆ ಸಂಚರಿಸುತ್ತಿದ್ದ ಬೆಂಗಾವಲು ವಾಹನಗಳು ಪರಸ್ಪರ ಢಿಕ್ಕಿಯಾಗಿವೆ ಎನ್ನಲಾಗಿದೆ. ಘಟನೆಯಲ್ಲಿ ರಾಹುಲ್ ಗಾಂಧಿ ಅವರ ಕಾರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
Next Story




