ದಿಲ್ಲಿಯ ಕೆಂಪು ಕೋಟೆ ಬಳಿ ಕಾರು ಸ್ಫೋಟ: 3 ವಾಹನಗಳು ಅಗ್ನಿಗಾಹುತಿ, ಹಲವರಿಗೆ ಗಾಯ

Photo Credit : indiatoday.in
ಹೊಸದಿಲ್ಲಿ: ದಿಲ್ಲಿಯ ಕೆಂಪು ಕೋಟೆಯ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ–1 ರ ಬಳಿ ಸೋಮವಾರ ಸಂಜೆ ಕಾರಿನಲ್ಲಿ ಸಂಭವಿಸಿದ ಸ್ಫೋಟ ಭಾರೀ ಆತಂಕ ಉಂಟುಮಾಡಿದೆ. ಸ್ಫೋಟದ ತೀವ್ರತೆಯಿಂದ ಸುತ್ತಮುತ್ತ ನಿಂತಿದ್ದ ಮೂರು ವಾಹನಗಳು ಬೆಂಕಿಗೆ ಆಹುತಿಯಾದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಿಲ್ಲಿ ಅಗ್ನಿಶಾಮಕ ದಳದ ಮಾಹಿತಿಯ ಪ್ರಕಾರ, ಸಂಜೆ ಸುಮಾರು 6.55 ಕ್ಕೆ ಸ್ಫೋಟದ ಬಗ್ಗೆ ಕರೆ ಬಂದಿದ್ದು, ತಕ್ಷಣವೇ ಏಳು ಅಗ್ನಿಶಾಮಕ ವಾಹನಗಳು ಹಾಗೂ 15 ತುರ್ತು ಚಿಕಿತ್ಸಾ ಆಂಬ್ಯುಲೆನ್ಸ್ಗಳನ್ನು ಸ್ಥಳಕ್ಕೆ ಕಳುಹಿಸಲಾಯಿತು. ತ್ವರಿತ ಕಾರ್ಯಾಚರಣೆಯ ಫಲವಾಗಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಅಗ್ನಿಶಾಮಕ ದಳ ಯಶಸ್ವಿಯಾಗಿದೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಕೆಲವು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಫೋಟದ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಫೋರೆನ್ಸಿಕ್ ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸುತ್ತಿದ್ದು, ಪೊಲೀಸರು ಪ್ರದೇಶವನ್ನು ತನಿಖೆ ಪ್ರಾರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.





