Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಂಗ್ರೆಸ್ ಪಟ್ಟಿ: ಅಮೇಥಿ, ರಾಯಬರೇಲಿ...

ಕಾಂಗ್ರೆಸ್ ಪಟ್ಟಿ: ಅಮೇಥಿ, ರಾಯಬರೇಲಿ ಇನ್ನೂ ಸಸ್ಪೆನ್ಸ್

ವಾರ್ತಾಭಾರತಿವಾರ್ತಾಭಾರತಿ28 March 2024 9:50 AM IST
share
ಕಾಂಗ್ರೆಸ್ ಪಟ್ಟಿ: ಅಮೇಥಿ, ರಾಯಬರೇಲಿ ಇನ್ನೂ ಸಸ್ಪೆನ್ಸ್

ಹೊಸದಿಲ್ಲಿ: ಕಾಂಗ್ರೆಸ್ ಪಕ್ಷ ಬುಧವಾರ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಉತ್ತರ ಪ್ರದೇಶ, ಜಾರ್ಖಂಡ್, ಮಧ್ಯಪ್ರದೇಶ, ತೆಲಂಗಾಣ ರಾಜ್ಯಗಳ 14 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಆದರೆ ಉತ್ತರ ಪ್ರದೇಶದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಪಡಿಸಿದರೂ, ಇದರ ಘೋಷಣೆಗೆ ಕಾಯಲಾಗುತ್ತಿದೆ ಎಂದು ಉನ್ನತ ಮೂಲಗಳು ಹೇಳಿವೆ. ಆದ್ದರಿಂದ ರಾಜ್ಯದಲ್ಲಿ ರಾಯಬರೇಲಿ ಮತ್ತು ಅಮೇಥಿ ಕ್ಷೇತ್ರದ ಅಭ್ಯರ್ಥಿಗಳ ಹೆಸರಷ್ಟೇ ಅಂತಿಮವಾಗಲು ಬಾಕಿ ಉಳಿದಿವೆ.

ಬುಧವಾರ ನಡೆದ ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆಯಲ್ಲಿ, ಪ್ರತಿಷ್ಠಿತ ರಾಂಚಿ ಕ್ಷೇತ್ರದಿಂದ ಮಾಜಿ ಕೇಂದ್ರ ಸಚಿವ ಸುಬೋಧ್ ಕಾಂತ್ ಸಹಾಯ್ ಸ್ಪರ್ಧಿಸುವ ಸಂಬಂಧ ಯಾವುದೇ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ; ಈ ಬಗ್ಗೆ ಮತ್ತಷ್ಟು ಚರ್ಚೆ ಅಗತ್ಯವಿದೆ ಎಂಬ ನಿರ್ಧಾರಕ್ಕೆ ಸಭೆಯಲ್ಲಿ ಬರಲಾಗಿದೆ ಎಂದು ಪಕ್ಷದ ಮೂಲಗಳು ಸ್ಪಷ್ಟಪಡಿಸಿವೆ.

ರಾಯಬರೇಲಿ ಮತ್ತು ಅಮೇಥಿ ಕ್ಷೇತ್ರಗಳ ಬಗ್ಗೆ ಬುಧವಾರ ಯಾವುದೇ ಚರ್ಚೆ ನಡೆದಿಲ್ಲ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರಾಯ್ ಹೇಳಿದ್ದಾರೆ. "ಕಳೆದ ಸಭೆಯಲ್ಲೇ ಈ ಎರಡು ಕ್ಷೇತ್ರಗಳ ಬಗ್ಗೆ ನಮ್ಮ ಅಭಿಪ್ರಾಯವನ್ನು ಪಕ್ಷದ ವರಿಷ್ಠರಿಗೆ ತಿಳಿಸಿದ್ದೇವೆ. ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವುದು ಕೇಂದ್ರ ನಾಯಕತ್ವಕ್ಕೆ ಬಿಟ್ಟದ್ದು" ಎಂದು ತಿಳಿಸಿದ್ದಾರೆ.

ಈ ಎರಡು ಕ್ಷೇತ್ರಗಳಲ್ಲಿ ಗಾಂಧಿ ಕುಟುಂಬದವರು ಸ್ಪರ್ಧಿಸಬೇಕು ಎಂದು ಕಳೆದ ವಾರ ಉತ್ತರ ಪ್ರದೇಶ ಕಾಂಗ್ರೆಸ್ ಮುಖಂಡರು ನಿರ್ಣಯ ಕೈಗೊಂಡಿದ್ದರು. ಕಾಂಗ್ರೆಸ್ ಪಕ್ಷ ವಯನಾಡ್ ಕ್ಷೇತ್ರದಿಂದ ಈಗಾಗಲೇ ರಾಹುಲ್ಗಾಂಧಿ ಹೆಸರನ್ನು ಪ್ರಕಟಿಸಿದೆ. ಆದರೆ ಅವರು ಅಮೇಥಿ ಕ್ಷೇತ್ರದಿಂದಲೂ ಸ್ಪರ್ಧಿಸಬೇಕು ಎಂಬ ಒತ್ತಡವಿದೆ. ಅಂತೆಯೇ ಸೋನಿಯಾಗಾಂಧಿಯವರಿಂದ ತೆರವಾಗುವ ರಾಯಬರೇಲಿ ಕೇತ್ರದಿಂದ ಪ್ರಿಯಾಂಕಾಗಾಂಧಿ ವಾದ್ರಾ ಸ್ಪರ್ಧಿಸಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ.

Tags

CongressCandidates
share
ವಾರ್ತಾಭಾರತಿ
ವಾರ್ತಾಭಾರತಿ
Next Story
X