ಲೈಂಗಿಕ ಕಿರುಕುಳ ಪ್ರಕರಣ: ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಗೆ ದಿಲ್ಲಿ ನ್ಯಾಯಾಲಯದಿಂದ ಮಧ್ಯಂತರ ಜಾಮೀನು

ಹೊಸದಿಲ್ಲಿ: ಭಾರತದ ಮಹಿಳಾ ಕುಸ್ತಿಪಟುಗಳಿಂದ ಆಪಾದಿತ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಿಜೆಪಿ ಸಂಸದ ಹಾಗೂ ಭಾರತದ ಕುಸ್ತಿ ಸಂಘಟನೆಯ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಹಾಗೂ ಸಹ ಆರೋಪಿ ವಿನೋದ್ ತೋಮರ್ ಅವರಿಗೆ ದಿಲ್ಲಿ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ ಎಂದು Live Law ಮಂಗಳವಾರ ಟ್ವೀಟಿಸಿದೆ.
ದಿಲ್ಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಆರೋಪಿಗಳಿಗೆ ಗುರುವಾರದವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ, ಸಾಮಾನ್ಯ ಜಾಮೀನು ಅರ್ಜಿಗಳನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿದೆ.
Next Story





