ಹೊಸದಿಲ್ಲಿ | ವೇಣುಗೋಪಾಲ್, ಸುರ್ಜೇವಾಲರೊಂದಿಗೆ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ

ಹೊಸದಿಲ್ಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ದಿಲ್ಲಿಯ ಎಐಸಿಸಿ ಕಚೇರಿಯ ಇಂದಿರಾ ಭವನದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಇದಕ್ಕೂ ಮೊದಲು ಸಿದ್ದರಾಮಯ್ಯ ಅವರು ದಿಲ್ಲಿಯ ಕನ್ನಡ ಭವನದಲ್ಲಿ ತಮ್ಮ ಆಪ್ತ ಸಚಿವರು, ಶಾಸಕರ ಜೊತೆ ಬೆಳಗಿನ ಉಪಹಾರ ಸವಿದರು.
ಸಚಿವರಾದ ಡಾ.ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಎಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರ್ಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರ ಪೊನ್ನಣ್ಣ ಸೇರಿ ಹಲವು ಪ್ರಮುಖರ ಭಾಗಿಯಾಗಿದ್ದರು.
Next Story






