ಚಿನ್ನದ ಬೆಲೆಯಲ್ಲಿ ಅಲ್ಪ ಕುಸಿತ; ಇಂದಿನ ದರವೆಷ್ಟು?

ಸಾಂದರ್ಭಿಕ ಚಿತ್ರ (AI)
ಅಮೆರಿಕದ ಕೇಂದ್ರೀಯ ಬ್ಯಾಂಕ್ ಫೆಡರಲ್ ರಿಸರ್ವ್ನ ಮುಂದಿನ ಕ್ರಮಗಳು ಮತ್ತು ಬ್ಯಾಂಕ್ ಆಫ್ ಇಂಗ್ಲೆಂಡ್ನ ನಿರ್ಧಾರಗಳು ಮುಂಬರುವ ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಯನ್ನು ನಿರ್ಧರಿಸಲಿವೆ.
ಫೆಬ್ರವರಿಯಿಂದ ಭೌಗೋಳಿಕ-ರಾಜಕೀಯ ಉದ್ವಿಗ್ನತೆಯ ಕಾರಣದಿಂದ ಚಿನ್ನದ ಬೆಲೆಗಳು ಕುಸಿಯುತ್ತಾ ಬಂದಿದ್ದು ಜೂನ್ನಲ್ಲಿ ಕನಿಷ್ಠ ಮಟ್ಟಕ್ಕೆ ಇಳಿದಿದ್ದವು. ಜುಲೈ ಪೂರ್ತಿ ಕನಿಷ್ಠ ಮಟ್ಟದಲ್ಲಿ ಮುಂದುವರಿದಿದ್ದ ಚಿನ್ನದ ದರ ಆಗಸ್ಟ್ ಮೊದಲ ವಾರದಿಂದಲೇ ಏರಿಕೆಯಾಗಿ ಟ್ರೆಂಡ್ ಇಡೀ ತಿಂಗಳು ಮುಂದುವರಿದಿತ್ತು. ನಂತರ ಆಗಸ್ಟ್ ಕೊನೆ ವಾರ ಮತ್ತು ಸೆಪ್ಟೆಂಬರ್ 1ರಿಂದ ಚಿನ್ನದ ದರ ತೀವ್ರ ಕುಸಿತದ ಹಾದಿಯಲ್ಲಿದೆ.
ನಡುವೆ ಒಂದೆರಡು ಬಾರಿ ಸ್ವಲ್ಪ ಏರಿಕೆಯಾಗಿದ್ದರೂ, ಕುಸಿತ ಜಾರಿಯಲ್ಲಿದೆ. ಕಳೆದ ವಾರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ ಕಂಡುಬಂದಿರುವುದು ಹಬ್ಬದ ದಿನಗಳಲ್ಲಿ ಗ್ರಾಹಕರಲ್ಲಿ ನಿರಾಳತೆ ಮೂಡಿಸಿತ್ತು. ಶನಿವಾರ ಬೆಲೆ ಮತ್ತೆ ಸ್ವಲ್ಪ ಏರಿಕೆ ಕಂಡುಬಂದಿದೆ. ಆದರೆ ಸೋಮವಾರ ಮತ್ತು ಮಂಗಳವಾರ ಮಾರುಕಟ್ಟೆ ಕುಸಿತದ ಜೊತೆಗೆ ಆರಂಭವಾಗಿತ್ತು. ಬುಧವಾರ ಚಿನ್ನದ ದರ ಸ್ವಲ್ಪ ಚೇತರಿಕೆ ದಾಖಲಿಸಿದ್ದರೂ, ಇದೀಗ ಗುರುವಾರ ಮತ್ತೆ ಇಳಿಕೆಯಾಗಿದೆ.
ಭೌಗೋಳಿಕ ರಾಜಕೀಯ ಉದ್ವಿಗ್ನತೆ ಮತ್ತು ಆರ್ಥಿಕ ಬದಲಾವಣೆಗಳ ನಡುವೆ ಚಿನ್ನ ಮತ್ತು ಬೆಳ್ಳಿಯ ಮಾರುಕಟ್ಟೆ ಏರಿಳಿತ ಎದುರಿಸುತ್ತಿದೆ. ಅಮೆರಿಕದ ಡಾಲರ್ ಬಲಗೊಂಡ ಕಾರಣ ಇತರ ದೇಶಗಳ ಖರೀದಿದಾರರಿಗೆ ಚಿನ್ನ-ಬೆಳ್ಳಿ ದುಬಾರಿಯಾಗುತ್ತಿದೆ. ಅಮೆರಿಕದ ಬಾಂಡ್ ಯೀಲ್ಡ್ ಹೆಚ್ಚಾಗಿರುವುದೂ ಬಡ್ಡಿ ನೀಡದ ಚಿನ್ನದ ಮೇಲಿನ ಹೂಡಿಕೆ ಆಕರ್ಷಣೆ ಕಡಿಮೆ ಮಾಡಿದೆ. ಅಮೆರಿಕದ ಕೇಂದ್ರೀಯ ಬ್ಯಾಂಕ್ ಫೆಡರಲ್ ರಿಸರ್ವ್ನ ಮುಂದಿನ ಕ್ರಮಗಳು ಮತ್ತು ಬ್ಯಾಂಕ್ ಆಫ್ ಇಂಗ್ಲೆಂಡ್ನ ನಿರ್ಧಾರಗಳು ಮುಂಬರುವ ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಯನ್ನು ನಿರ್ಧರಿಸಲಿವೆ.
ಚಿನ್ನದ ದರದಲ್ಲಿ ಸ್ವಲ್ಪ ಇಳಿಕೆ
ಸೆಪ್ಟೆಂಬರ್ 17ರಂದು ಗುರುವಾರ 11 ಗಂಟೆಯ ವಹಿವಾಟಿನಲ್ಲಿ ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಬುಧವಾರ ಸಂಜೆಯ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 60 ರೂ. ಇಳಿಕೆಯಾಗಿದ್ದು, ಹತ್ತು ಗ್ರಾಂ ಬೆಲೆ 1,52,840 ರೂ. ಗೆ ಬಂದು ನಿಂತಿದೆ. ಆಭರಣ ಚಿನ್ನವಾದ 22 ಕ್ಯಾರೆಟ್ ಬೆಲೆಯು ಪ್ರತಿ ಗ್ರಾಂಗೆ 55 ರೂ. ಕುಸಿದಿದ್ದು, ಹತ್ತು ಗ್ರಾಂಗೆ 1,40,100 ರೂ. ಗೆ ತಲುಪಿದೆ. 18 ಕ್ಯಾರೆಟ್ ಚಿನ್ನವು ಪ್ರತಿ ಗ್ರಾಂಗೆ 45 ರೂ. ಕಡಿಮೆಯಾಗಿ, ಹತ್ತು ಗ್ರಾಂಗೆ 1,14,630 ರೂ. ಗೆ ತಲುಪಿದೆ.
ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ?
ಸೆಪ್ಟೆಂಬರ್ 17ರಂದು ಗುರುವಾರ ಬೆಳಗಿನ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಮತ್ತೆ ಸ್ವಲ್ಪ ಇಳಿಕೆ ದಾಖಲಿಸಿದೆ. ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 15,284 (-60) ರೂ. ರಷ್ಟಕ್ಕೆ ತಲುಪಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 14,010 (-55) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 11,463 (-45) ರೂ. ಬೆಲೆಗೆ ಬಂದು ನಿಂತಿದೆ.
ಸ್ಥಿರವಾದ ಬೆಳ್ಳಿಯ ದರ
ಮಂಗಳೂರಿನಲ್ಲಿ ಜುಲೈ 11ರಿಂದ ಬೆಳ್ಳಿಯ ದರ ಬಹುತೇಕ ಪ್ರತಿ ಕೆಜಿಗೆ 2,35,000 ರೂ.ಗೆ ಸ್ಥಿರವಾಗಿತ್ತು. ಆದರೆ ಆಗಸ್ಟ್ ಆರಂಭದ ವಾರಗಳಲ್ಲಿ ಮತ್ತೆ ಏರಿಕೆಯಾಗಿ ಪ್ರತಿ ಕೆಜಿಗೆ 2,60,000 ರೂ. ವರೆಗೆ ಏರಿತ್ತು. ಆಗಸ್ಟ್ ಕೊನೆ ವಾರದಲ್ಲಿ ಮತ್ತು ಸೆಪ್ಟೆಂಬರ್ ಆರಂಭದಲ್ಲಿ ಬೆಳ್ಳಿಯ ದರ ಕುಸಿದು ಪ್ರತಿ ಕೆಜಿಗೆ 2,45,000 ರೂ.ಗೆ ಬಂದು ನಿಂತಿತ್ತು. ಸೆಪ್ಟೆಂಬರ್ ಎರಡನೇ ವಾರದಲ್ಲಿ ಪ್ರತಿ ಕೆಜಿ ಬೆಳ್ಳಿದರ 2,50,000 ರೂ.ಗೆ ಬಂದು, ಅದೇ ಬೆಲೆಯಲ್ಲಿ ಸ್ಥಿರವಾಗಿತ್ತು. ಆದರೆ ಕಳೆದ ಶುಕ್ರವಾರ ಸೆಪ್ಟೆಂಬರ್ 11ರಂದು ಮತ್ತೆ ಪ್ರತಿ ಗ್ರಾಂ ಬೆಳ್ಳಿ ದರ 10 ರೂ. ಕುಸಿತ ಕಂಡು ಪ್ರತಿ ಕೆಜಿಗೆ 2,45,000 ರೂ.ಗೆ ಬಂದು ತಲುಪಿದೆ. ಇದೀಗ ಅದೇ ಬೆಲೆಗೆ ಸ್ಥಿರವಾಗಿದೆ.
ವಿವಿಧ ನಗರಗಳಲ್ಲಿ 1 ಗ್ರಾಮ್ ಚಿನ್ನದ ದರ (ಬೆಳಗಿನ ವಹಿವಾಟು) ಹೇಗಿದೆ?
ದಿಲ್ಲಿ: 24 ಕ್ಯಾರೆಟ್ ಚಿನ್ನದ ದರ 15,299 (-60) ರೂ., 22 ಕ್ಯಾರೆಟ್ ಚಿನ್ನದ ದರ 14,025 (-55) ರೂ.
ಮುಂಬೈ: 24 ಕ್ಯಾರೆಟ್ ಚಿನ್ನದ ದರ 15,284 (-60) ರೂ., 22 ಕ್ಯಾರೆಟ್ ಚಿನ್ನದ ದರ 14,010 (-55) ರೂ.
ಅಹಮದಾಬಾದ್: 24 ಕ್ಯಾರೆಟ್ ಚಿನ್ನದ ದರ 15,289 (-60) ರೂ., 22 ಕ್ಯಾರೆಟ್ ಚಿನ್ನದ ದರ 14,015 (-55) ರೂ.
ಚೆನ್ನೈ: 24 ಕ್ಯಾರೆಟ್ ಚಿನ್ನದ ದರ 15,284 (-60) ರೂ., 22 ಕ್ಯಾರೆಟ್ ಚಿನ್ನದ ದರ 14,010 (-55) ರೂ.
ಕೋಲ್ಕತ್ತಾ: 24 ಕ್ಯಾರೆಟ್ ಚಿನ್ನದ ದರ 15,284 (-60) ರೂ., 22 ಕ್ಯಾರೆಟ್ ಚಿನ್ನದ ದರ 14,010 (-55) ರೂ.
ಹೈದರಾಬಾದ್: 24 ಕ್ಯಾರೆಟ್ ಚಿನ್ನದ ದರ 15,284 (-60) ರೂ., 22 ಕ್ಯಾರೆಟ್ ಚಿನ್ನದ ದರ 14,010 (-55) ರೂ.
ಜೈಪುರ: 24 ಕ್ಯಾರೆಟ್ ಚಿನ್ನದ ದರ 15,299 (-60) ರೂ., 22 ಕ್ಯಾರೆಟ್ ಚಿನ್ನದ ದರ 14,025 (-55) ರೂ.
ಚಂಡೀಗಢ: 24 ಕ್ಯಾರೆಟ್ ಚಿನ್ನದ ದರ 15,299 (-60) ರೂ., 22 ಕ್ಯಾರೆಟ್ ಚಿನ್ನದ ದರ 14,025 (-55) ರೂ.
ಲಕ್ನೋ: 24 ಕ್ಯಾರೆಟ್ ಚಿನ್ನದ ದರ 15,299 (-60) ರೂ., 22 ಕ್ಯಾರೆಟ್ ಚಿನ್ನದ ದರ 14,025 (-55) ರೂ.
ಕೊಚ್ಚಿ: 24 ಕ್ಯಾರೆಟ್ ಚಿನ್ನದ ದರ 15,284 (-60) ರೂ., 22 ಕ್ಯಾರೆಟ್ ಚಿನ್ನದ ದರ 14,010 (-55) ರೂ.






