ಭಾರೀ ಪ್ರವಾಹ: ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

Photo Credit: AP \ PTI
ಕೊಲೊಂಬೊ: ಭಾರೀ ಪ್ರವಾಹದಿಂದ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಅಪಾರ ಪ್ರಮಾಣದ ಹಾನಿಯುಂಟಾಗಿರುವ ಹಿನ್ನೆಲೆಯಲ್ಲಿ ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.
ಶನಿವಾರ ಬಿಡುಗಡೆಯಾಗಿರುವ ಅಧಿಕೃತ ಅಧಿಸೂಚನೆಯ ಪ್ರಕಾರ, ಶ್ರೀ ಲಂಕಾದಾದ್ಯಂತ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ.
ಇದಕ್ಕೂ ಮುನ್ನ, ಶುಕ್ರವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸುವಂತೆ ವಿರೋಧ ಪಕ್ಷಗಳ ನಾಯಕರು ಆಗ್ರಹಿಸಿದ್ದರು. ಅಧ್ಯಕ್ಷ ದಿಸ್ಸಾನಾಯಕೆಗೆ ಪತ್ರ ಬರೆದಿದ್ದ ವೈದ್ಯರ ನೌಕರರ ಸಂಘ ಕೂಡಾ ದೇಶಾದ್ಯಂತ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಬೇಕಾದ ಅಗತ್ಯತೆಯ ಕುರಿತು ಒತ್ತಿ ಹೇಳಿತ್ತು.
ಈ ಹಿನ್ನೆಲೆಯಲ್ಲಿ ಜಾರಿಗೆ ಬಂದಿರುವ ತುರ್ತು ಪರಿಸ್ಥಿತಿಯಿಂದ ಪರಿಹಾರ ಸಮನ್ವಯ ಮತ್ತು ರಕ್ಷಣಾ ಕಾರ್ಯಾಚರಣೆಗಳಿಗೆ ವೇಗ ದೊರೆಯಬಹುದು ಎಂದು ನಿರೀಕ್ಷಿಸಲಾಗಿದೆ.
Next Story





