ಉತ್ತರ ಪ್ರದೇಶ | ಸೋನ್ ಭದ್ರದಲ್ಲಿ ಕಲ್ಲು ಕ್ವಾರಿ ಕುಸಿತ : ಓರ್ವ ಮೃತ್ಯು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

Photo | PTI
ಸೋನ್ ಭದ್ರ(ಉತ್ತರ ಪ್ರದೇಶ): ಕಲ್ಲು ಕ್ವಾರಿ ಕುಸಿದ ಬಿದ್ದ ಪರಿಣಾಮ ಓರ್ವ ಮೃತಪಟ್ಟು, 8 ಮಂದಿ ಅವಶೇಷಗಳಡಿ ಸಿಲುಕಿಕೊಂಡಿರುವ ಘಟನೆ ಉತ್ತರ ಪ್ರದೇಶದ ಸೋನ್ ಭದ್ರ ಜಿಲ್ಲೆಯಲ್ಲಿ ನಡೆದಿದೆ.
ಒಬ್ರಾದ ಬಿಲ್ಲಿ ಮರ್ಕುಂಡಿ ಗ್ರಾಮದಲ್ಲಿರುವ ಕಲ್ಲಿನ ಕ್ವಾರಿಯಲ್ಲಿ ಘಟನೆ ನಡೆದಿದೆ. ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆಯ ತಂಡಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ಅವಶೇಷಗಳಡಿ ಓರ್ವ ಕಾರ್ಮಿಕನ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಹೊರ ತೆಗೆಯುವ ಪ್ರಯತ್ನಗಳು ನಡೆಯುತ್ತಿದೆ ಎಂದು ಸೋನ್ ಭದ್ರ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ವರ್ಮಾ ಹೇಳಿದ್ದಾರೆ.
Next Story





