ಕೋಲ್ಕತ್ತಾ | ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ : ಮೂವರು ಆರೋಪಿಗಳ ಬಂಧನ

Photo | indiatoday
ಕೋಲ್ಕತ್ತಾ : ಕಾನೂನು ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ.
ಬುಧವಾರ ಸಂಜೆ 7.30 ರಿಂದ ರಾತ್ರಿ 10.50ರ ನಡುವೆ ದಕ್ಷಿಣ ಕೋಲ್ಕತ್ತಾದ ಕಾನೂನು ಕಾಲೇಜಿನ ಕ್ಯಾಂಪಸ್ನಲ್ಲಿ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿ ಮನೋಜಿತ್ ಮಿಶ್ರಾ, ಪ್ರಮಿತ್ ಮುಖರ್ಜಿ, ಝೈಬ್ ಅಹ್ಮದ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಲ್ಲಿ ಇಬ್ಬರು ವಿದ್ಯಾರ್ಥಿಗಳಾಗಿದ್ದು, ಓರ್ವ ಹಳೆ ವಿಧ್ಯಾರ್ಥಿಯಾಗಿದ್ದಾನೆ ಎಂದು ವರದಿಯಾಗಿದೆ.
ಕೋಲ್ಕತ್ತಾದ ಆರ್ಜಿಕರ್ ವೈದ್ಯಕೀಯ ಕಾಲೇಜಿನಲ್ಲಿ ಯುವ ವೈದ್ಯೆಯ ಅತ್ಯಾಚಾರ ಕೊಲೆ ಪ್ರಕರಣ ದೇಶದಾದ್ಯಂತ ಭಾರೀ ಸುದ್ದಿಯಾಗಿತ್ತು. ಘಟನೆಯ ನೆನಪು ಮಾಸುವ ಮೊದಲು ಕೋಲ್ಕತ್ತಾದ ಕಾನೂನು ಕಾಲೇಜಿನಲ್ಲಿ ಇಂತಹ ಘಟನೆ ನಡೆದಿದೆ.
ಬಂಧಿತ ಮೂವರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಆರೋಪಿಗಳನ್ನು ಐದು ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
Next Story





