Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈಡಿ ಸಮನ್ಸ್ ಧಿಕ್ಕರಿಸಿದ ಆರೋಪ:...

ಈಡಿ ಸಮನ್ಸ್ ಧಿಕ್ಕರಿಸಿದ ಆರೋಪ: ಜಾರ್ಖಂಡ್ ಸಿಎಂ ವಿರುದ್ಧ ಕ್ರಮಕ್ಕೆ ಸುಪ್ರೀಂ ತಡೆ

ವಾರ್ತಾಭಾರತಿವಾರ್ತಾಭಾರತಿ26 Feb 2026 7:15 AM IST
share
ಈಡಿ ಸಮನ್ಸ್ ಧಿಕ್ಕರಿಸಿದ ಆರೋಪ: ಜಾರ್ಖಂಡ್ ಸಿಎಂ ವಿರುದ್ಧ ಕ್ರಮಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮಾಲೀಕತ್ವದ, ಅವರು ಹೊಂದಿರುವ ಮತ್ತು ಸ್ವಾಧೀನಪಡಿಸಿಕೊಂಡ ಭೂಮಿಯ ಮೌಲ್ಯಮಾಪನದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾನೂನು ಜಾರಿ ನಿರ್ದೇಶನಾಲಯ ಪದೇ ಪದೇ ನೀಡಿದ ಸಮನ್ಸ್ ಧಿಕ್ಕರಿಸಿದ ಪ್ರಕರಣದಲ್ಲಿ ಸಿಎಂ ವಿರುದ್ಧದ ಕ್ರಮಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ವಿಧಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ ಮಲ್ಯ ಬಗ್ಚಿ ಹಾಗೂ ವಿಪುಲ್ ಎಂ ಪಾಂಚೋಲಿ ಅವರಿದ್ದ ನ್ಯಾಯಪೀಠ, ಈ ಸಂಬಂಧ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ನೀಡಿದ್ದು, ನಾಲ್ಕು ವಾರಗಳ ಒಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ. ಆ ಬಳಿಕ ಮೂರು ವಾರಗಳ ಒಳಗೆ ಸ್ಪಷ್ಟನೆಯನ್ನು ನೀಡಲು ಸೊರೇನ್ ಗೆ ಅವಕಾಶ ಕಲ್ಪಿಸಿದೆ.

ಸೊರೇನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟ್ಗಿ, "ಇದು ಕಾನೂನು ಜಾರಿ ನಿರ್ದೇಶನಾಲಯ ಅಧಿಕಾರವನ್ನು ಸಾರಾಸಗಟಾಗಿ ದುರುಪಯೋಗ ಪಡಿಸಿಕೊಂಡ ಪ್ರಕರಣವಾಗಿದ್ದು, ನಿರ್ದೇಶನಾಲಯದ ಮುಂದೆ ಮೂರು ಬಾರಿ ಹಾಜರಾಗಿ ಅವರ ಪ್ರಶ್ನೆಗಳಿಗೆ ಉತ್ತರ ನೀಡಿದರೂ ಮೇಲಿಂದ ಮೇಲೆ ಸಮನ್ಸ್ ನೀಡಿದೆ" ಎಂದು ವಾದಿಸಿದರು. ಇದು ಪ್ರಚೋದಿತ ಮತ್ತು ರಾಜಕೀಯ ಬಲಿಪಶುವಾಗಿ ಮಾಡುವ ಪ್ರಯತ್ನ ಎಂದು ರೋಹಟ್ಗಿ ಹೇಳಿದರು.

ಪ್ರತಿವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಕೌಶಿಕ್, ಸಿಎಂ ಉದ್ದೇಶಪೂರ್ವಕವಾಗಿ ಮತ್ತು ಇಚ್ಛಾಪೂರ್ವಕವಾಗಿ ಸಮನ್ಸ್ ಕಡೆಗಣಿಸುವ ಮೂಲಕ ತನಿಖೆಯ ಪ್ರಗತಿಗೆ ತಡೆ ಒಡ್ಡಿದ್ದಾರೆ ಎಂದು ಆಪಾದಿಸಿದರು. ಆದರೆ ಬೆದರಿಸುವ ಉದ್ದೇಶದಿಂದ ಇ.ಡಿ. ವಿಚಾರಣೆ ನಡೆಸಿದ್ದರೆ ಅದು ತನ್ನ ಉದ್ದೇಶವನ್ನು ಈಡೇರಿಸಿಕೊಂಡಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು. ದೊಡ್ಡ ಸಂಖ್ಯೆಯ ದೂರುಗಳನ್ನು ನೀವು ದಾಖಲಿಸಿರುವುದು ಪತ್ರಿಕಾ ವರದಿಗಳಿಂದ ತಿಳಿದುಬಂದಿದೆ ಎಂದು ನ್ಯಾಯಾಧೀಶರು ಸ್ಪಷ್ಟಪಡಿಸಿದರು.

Tags

Supreme CourtJharkhand CMEDsummons
share
ವಾರ್ತಾಭಾರತಿ
ವಾರ್ತಾಭಾರತಿ
Next Story
X