ತಮಿಳುನಾಡಿನಲ್ಲಿ ಗೋಹತ್ಯೆ ನಿಷೇಧಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Photo | ndtv
ಹೊಸದಿಲ್ಲಿ: ತಮಿಳುನಾಡಿನಲ್ಲಿ ಬಕ್ರೀದ್ ಸೇರಿದಂತೆ ಯಾವುದೇ ದಿನ ರಾಜ್ಯದ ಯಾವುದೇ ಭಾಗದಲ್ಲಿ ಗೋವು ಮತ್ತು ಕರುಗಳ ಹತ್ಯೆಯನ್ನು ನಿಷೇಧಿಸುವಂತೆ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.
ತಮಿಳುನಾಡು ಸರಕಾರ ಸಲ್ಲಿಸಿದ್ದ ವಿಶೇಷ ರಜೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ಅರ್ಜಿಗೆ ನೋಟಿಸ್ ಜಾರಿಗೊಳಿಸಿದ್ದು, ಹೈಕೋರ್ಟ್ ಆದೇಶದ ಜಾರಿಗೆ ತಡೆ ನೀಡಿದೆ.
ಹೈಕೋರ್ಟ್ ಆದೇಶದ ಕೊನೆಯ ಪ್ಯಾರಾಗ್ರಾಫ್ನಲ್ಲಿ ರಾಜ್ಯಾದ್ಯಂತ ಗೋವು ಮತ್ತು ಕರುಗಳ ವಧೆಗೆ ಸಂಪೂರ್ಣ ನಿಷೇಧ ವಿಧಿಸಿರುವ ನಿರ್ದೇಶನವು ಪ್ರಾಥಮಿಕ ದೃಷ್ಟಿಯಿಂದ 'ತಿದ್ದುಪಡಿ ಅಗತ್ಯವಿರುವಂತಿದೆ' ಎಂದು ಪೀಠವು ಅಭಿಪ್ರಾಯಪಟ್ಟಿದೆ.
Next Story




