ಭೀಮಣ್ಣ ಖಂಡ್ರೆ ನಿಧನಕ್ಕೆ ಸುರ್ಜೇವಾಲಾ ಸಂತಾಪ

ಹೊಸದಿಲ್ಲಿ: ಹಿರಿಯ ರಾಜಕಾರಣಿ, ಮುತ್ಸದ್ದಿ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಸಂತಾಪ ವ್ಯಕ್ತಪಡಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು, ಬಸವ ಶರಣ ತತ್ತ್ವದ ಆಧಾರದಲ್ಲಿ ತಮ್ಮ ಬದುಕನ್ನು ನಡೆಸಿದ ಭೀಮಣ್ಣ ಖಂಡ್ರೆಯವರು, ಕರ್ನಾಟಕ ಏಕೀಕರಣ ಚಳವಳಿಯಲ್ಲಿಯೂ ಪ್ರಮುಖ ಕೊಡುಗೆ ನೀಡಿದ್ದರು ಎಂದು ಸುರ್ಜೇವಾಲಾ ಹೇಳಿದ್ದಾರೆ.
ಜನರಿಗಾಗಿ ತಮ್ಮ ಜೀವನವನ್ನು ಮೀಸಲಿಟ್ಟ ಈ ಧೀಮಂತ ನಾಯಕನ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ. ಸುರ್ಜೇವಾಲಾ ಅವರು, ಭಗವಂತನು ಮೃತರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
Next Story





