ಟಿಎಂಸಿಗೆ ರಾಜೀನಾಮೆ ನೀಡಿದ ಬೆನ್ನಲ್ಲೆ ಹಿಮಂತ ಬಿಸ್ವಾ ಶರ್ಮಾರನ್ನು ಭೇಟಿಯಾದ ಸುಶ್ಮಿತಾ ದೇವ್

Screengrab: X
ಹೊಸದಿಲ್ಲಿ: ರಾಜ್ಯಸಭಾ ಸಂಸದ ಸ್ಥಾನಕ್ಕೆ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೆ ಸುಶ್ಮಿತಾ ದೇವ್ ಅಸ್ಸಾಂ ಮುಖ್ಯಮಂತ್ರಿ, ಬಿಜೆಪಿ ನಾಯಕ ಹಿಮಂತ ಬಿಸ್ವಾ ಶರ್ಮಾ ರನ್ನು ದಿಲ್ಲಿಯಲ್ಲಿ ಭೇಟಿಯಾಗಿದ್ದಾರೆ.
ಪಕ್ಷದ ಅನಿಯಂತ್ರಿತ ಭ್ರಷ್ಟಾಚಾರ ಮತ್ತು ಅರಾಜಕತೆಯ ಆಡಳಿತವನ್ನು ಆರೋಪಿಸಿ ಅವರು ರಾಜ್ಯಸಭಾ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಸುಶ್ಮಿತಾ ದೇವ್ ಅವರು 2021ರಲ್ಲಿ ಕಾಂಗ್ರೆಸ್ ತೊರೆದು ಟಿಎಂಸಿ ಸೇರಿದ್ದರು.
ಟಿಎಂಸಿಯ ರಾಷ್ಟ್ರೀಯ ವಕ್ತಾರರಾಗಿ ನೇಮಕಗೊಂಡ ಅವರನ್ನು ಪಕ್ಷವು ರಾಜ್ಯಸಭೆಗೆ ಆಯ್ಕೆ ಮಾಡಿತ್ತು.
Next Story




