ತಮಿಳುನಾಡು| ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ; ಕನಿಷ್ಠ 16 ಜನರು ಮೃತ್ಯು

Photo| ANI
ಚೆನ್ನೈ: ತಮಿಳುನಾಡಿನ ವಿರುಧುನಗರ ಜಿಲ್ಲೆಯ ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಸ್ಫೋಟ ಸಂಭವಿಸಿ ಕನಿಷ್ಠ 16 ಜನರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
ಕಟ್ಟನಾರಪಟ್ಟಿ ಗ್ರಾಮದಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಸ್ಥಳದಲ್ಲಿ ಅಗ್ನಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಗಾಯಗೊಂಡ ಆರು ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
Next Story




