ತೆಲಂಗಾಣ: ಫಾರ್ಮಾ ಸ್ಥಾವರ ಸ್ಫೋಟ ಪ್ರಕರಣ; ಮೃತರ ಸಂಖ್ಯೆ 40ಕ್ಕೇರಿದೆ

Photo | thehindu
ಹೈದರಾಬಾದ್: ತೆಲಂಗಾಣದ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಇನ್ನೋರ್ವ ವ್ಯಕ್ತಿ ಶನಿವಾರ ಮೃತಪಟ್ಟಿದ್ದು, ಇದರೊಂದಿಗೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 40ಕ್ಕೇರಿದೆ.
ಮೃತ ವ್ಯಕ್ತಿಯು 48 ವರ್ಷದವನಾಗಿದ್ದು, ಉತ್ತರಪ್ರದೇಶದ ನಿವಾಸಿ. ಜೂನ್ 30ರಂದು ಶೇ.70ರಷ್ಟು ಸುಟ್ಟಗಾಯಗಳಾಗಿದ್ದ, ಆತನ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟದಲ್ಲಿ ಗಾಯಗೊಂಡಿರುವ ಇನ್ನೂ 19 ವ್ಯಕ್ತಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಸಂಗಾರೆಡ್ಡಿ ಜಿಲ್ಲಾಧಿಕಾರಿ ಚಂದ್ರಶೇಖರ ಬಡುಗು ತಿಳಿಸಿದ್ದಾರೆ.
ಪಾಶಮಿಲಾರಮ್ನಲ್ಲಿರುವ ಫಾರ್ಮಾ ಸ್ಥಾವರದಲ್ಲಿ ಸ್ಫೋಟ ಸಂಭವಿಸಿದ ಬಳಿಕ ನಾಪತ್ತೆಯಾಗಿರುವ 9 ಮಂದಿಯ ಶೋಧಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತವ್ಯಕ್ತಿಗಳನ್ನು ಗುರುತಿಸುವ ಹಾಗೂ ಪಾರ್ಥಿವಶರೀರದ ಪಳೆಯುಳಿಕೆಗಳನ್ನು ಅವರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸುವ ಕಾರ್ಯ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.