Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈಡಿ ಮುಖ್ಯಸ್ಥರಾಗಿ ಸಂಜಯ್ ಕುಮಾರ್ ಅವಧಿ...

ಈಡಿ ಮುಖ್ಯಸ್ಥರಾಗಿ ಸಂಜಯ್ ಕುಮಾರ್ ಅವಧಿ ವಿಸ್ತರಣೆ ಕೋರಿ ಸುಪ್ರೀಂಕೋರ್ಟ್ ಗೆ ಕೇಂದ್ರ ಮತ್ತೆ ಮೊರೆ

ವಾರ್ತಾಭಾರತಿವಾರ್ತಾಭಾರತಿ26 July 2023 1:47 PM IST
share
ಈಡಿ ಮುಖ್ಯಸ್ಥರಾಗಿ ಸಂಜಯ್ ಕುಮಾರ್ ಅವಧಿ ವಿಸ್ತರಣೆ ಕೋರಿ ಸುಪ್ರೀಂಕೋರ್ಟ್ ಗೆ ಕೇಂದ್ರ ಮತ್ತೆ ಮೊರೆ

ಹೊಸದಿಲ್ಲಿ: ಅನುಷ್ಠಾನ ನಿರ್ದೇಶನಾಲಯದ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾರ ಸೇವಾವಧಿಯನ್ನು ವಿಸ್ತರಿಸಲು ಅನುಮತಿ ನೀಡಬೇಕೆಂದು ಕೋರಿ ಕೇಂದ್ರ ಸರಕಾರವು ಬುಧವಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.

ಮಿಶ್ರಾರ ಮೂರನೇ ವಿಸ್ತರಿತ ಸೇವಾವಧಿಯು ನವೆಂಬರ್ನಲ್ಲಿ ಕೊನೆಗೊಳ್ಳಲಿದೆ. ಆದರೆ, ಅದಕ್ಕಿಂತ ನಾಲ್ಕು ತಿಂಗಳು ಮೊದಲೇ, ಅಂದರೆ ಜುಲೈ 31ರಂದು ಅಧಿಕಾರದಿಂದ ಕೆಳಗಿಳಿಯುವಂತೆ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ವಿಕ್ರಮ್ನಾಥ್ ಮತ್ತು ಸಂಜಯ್ ಕರೋಲ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ನ್ಯಾಯಪೀಠವೊಂದು ಈ ತಿಂಗಳ ಮೊದಲಲ್ಲಿ ಮಿಶ್ರಾಗೆ ನಿರ್ದೇಶನ ನೀಡಿತ್ತು. 2021 ನವೆಂಬರ್ ಮತ್ತು 2022 ನವೆಂಬರ್ನಲ್ಲಿ ಅವರಿಗೆ ನೀಡಲಾಗಿರುವ ಎರಡು ವಿಸ್ತರಣೆಗಳು ಕಾನೂನುಬಾಹಿರ ಎಂಬುದಾಗಿ ನ್ಯಾಯಾಲಯ ಹೇಳಿತ್ತು.

ಹುದ್ದೆಯಲ್ಲಿ ಯಾರು ಇರುತ್ತಾರೆ ಎನ್ನುವುದು ಮುಖ್ಯವಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯಿಸಿದ್ದರು. ‘‘ಅಭಿವೃದ್ಧಿ ವಿರೋಧಿ ಮನೋಸ್ಥಿತಿ ಹೊಂದಿರುವ ವಂಶ ಪಾರಂಪರ್ಯವಾದಿ ರಾಜಕಾರಣಿಗಳ ಭ್ರಷ್ಟಾಚಾರದ ಮೇಲೆ ಅನುಷ್ಠಾನ ನಿರ್ದೇಶನಾಲಯ ನಿಗಾ ಇಡುತ್ತದೆ’’ ಎಂದು ಅವರು ಹೇಳಿದ್ದರು.

ಆದರೆ, ಬುಧವಾರ ನ್ಯಾ. ಗವಾಯಿ ನೇತೃತ್ವದ ಪೀಠದ ಮುಂದೆ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅನುಷ್ಠಾನ ನಿರ್ದೇಶನಾಲಯದ ನಿರ್ದೇಶಕ ಮಿಶ್ರಾರ ಸೇವಾವಧಿ ಕುರಿತು ನೀಡಿರುವ ತೀರ್ಪನ್ನು ಮರುಪರಿಶೀಲಿಸಬೇಕೆಂದು ಕೋರುವ ಅರ್ಜಿಯ ವಿಚಾರಣೆಯನ್ನು ತುರ್ತಾಗಿ ನಡೆಸುವಂತೆ ಒತ್ತಾಯಿಸಿದರು. ಇದಕ್ಕೆ ಒಪ್ಪಿದ ನ್ಯಾಯಾಲಯ, ಗುರುವಾರ ಸಂಜೆ 3:30ಕ್ಕೆ ಅರ್ಜಿಯ ವಿಚಾರಣೆ ನಡೆಸುವುದಾಗಿ ಹೇಳಿತು.

ಮಿಶ್ರಾರನ್ನು ಮೊದಲು, 2018 ನವೆಂಬರ್ 19ರಂದು ಎರಡು ವರ್ಷಗಳ ಅವಧಿಗೆ ಅನುಷ್ಠಾನ ನಿರ್ದೇಶನಾಲಯದ ನಿರ್ದೇಶಕರಾಗಿ ಸರಕಾರ ನೇಮಿಸಿತ್ತು. 2020ರಲ್ಲಿ ಸರಕಾರವು ಅವರ ಸೇವಾವಧಿಯನ್ನು ಒಂದು ವರ್ಷ ವಿಸ್ತರಿಸಿತು.

2021 ಸೆಪ್ಟಂಬರ್ನಲ್ಲಿ, ಮಿಶ್ರಾರ ಸೇವಾವಧಿಯನ್ನು ಇನ್ನು ವಿಸ್ತರಿಸದಂತೆ ಸುಪ್ರೀಂ ಕೋರ್ಟ್ ಸರಕಾರಕ್ಕೆ ನಿರ್ದೇಶನ ನೀಡಿತ್ತು. ಆದರೆ, ಅನುಷ್ಠಾನ ನಿರ್ದೇಶನಾಲಯ ಮತ್ತು ಸಿಬಿಐ ನಿರ್ದೇಶಕರ ಅವಧಿಯನ್ನು ಐದು ವರ್ಷಗಳವರೆಗೆ ವಿಸ್ತರಿಸಲು ಸರಕಾರಕ್ಕೆ ಅಧಿಕಾರ ನೀಡುವ ಎರಡು ಅಧ್ಯಾದೇಶಗಳನ್ನು ಸರಕಾರವು ಜಾರಿಗೆ ತಂದಿತು. ಇದರ ಆಧಾರದಲ್ಲಿ, ಮಿಶ್ರಾರ ಅವಧಿಯನ್ನು ಇನ್ನೊಂದು ವರ್ಷ ವಿಸ್ತರಿಸಲಾಯಿತು.

2022 ನವೆಂಬರ್ನಲ್ಲಿ ಸರಕಾರವು ಅವರ ಸೇವಾವಧಿಯನ್ನು ಮತ್ತೊಂದು ವರ್ಷ ವಿಸ್ತರಿಸಿತು.ಈ ವಿಸ್ತರಣೆಗಳನ್ನು ಪ್ರಶ್ನಿಸಿ ಪ್ರತಿಪಕ್ಷಗಳ ನಾಯಕರು ಸುಪ್ರೀಂ ಕೋರ್ಟ್ಗೆ ಹೋಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X